7:44 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸದನದಲ್ಲಿ ಬ್ರೇಕ್ ಫಾಸ್ಟ್ ಚರ್ಚೆ: ಶಾಸಕರ ಭವನದಲ್ಲಿಯೇ ಇಡ್ಲಿ-ದೋಸೆ ಸಿಗ್ತಿಲ್ಲ ಎಂದ ಐವನ್ ಡಿಸೋಜ

19/03/2026, 14:00

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ವಿಧಾನ ಪರಿಷತ್ತಿನಲ್ಲೂ ಕೇಳಿ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದಿರುವ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಕಲಾಪ ಆರಂಭವಾಗುತ್ತಿದ್ದಂತೆಯೇ ಮಾತನಾಡಿದ ಅವರು, ಶಾಸಕರ ಭವನದಲ್ಲಿಯೇ ತಿಂಡಿ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
“ಶಾಸಕರಿಗೇ ಇಂತಹ ಸ್ಥಿತಿ ಇದ್ದರೆ ಜನರ ಪರಿಸ್ಥಿತಿ ಹೇಗಿರಬಹುದು?” ಎಂದು ಪ್ರಶ್ನಿಸಿ, ಸಮಸ್ಯೆ ಯಾವಾಗ ಪರಿಹಾರವಾಗಲಿದೆ ಎಂದು ಸರ್ಕಾರದಿಂದ ಸ್ಪಷ್ಟನೆ ಕೇಳಿದರು.
ಈ ವೇಳೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡ ಸದಸ್ಯರು ಇಡ್ಲಿ, ವಡೆ ಸಿಗುತ್ತಿಲ್ಲ ಎಂದು ದೂರುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹಮದ್, ತಿಂಡಿ ಸಮಸ್ಯೆಗೆ ಗ್ಯಾಸ್ ಕೊರತೆಯೇ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಹಾಸ್ಯಭರಿತವಾಗಿ “10 ನಿಮಿಷ ಸಮಯ ಕೊಡುತ್ತೇನೆ, ತಿಂಡಿ ತಿಂದು ಬನ್ನಿ” ಎಂದು ಹೇಳಿ ಸದನದಲ್ಲಿ ನಗೆ ಮೂಡಿಸಿದರು. ಆದರೆ ಈ ಘಟನೆ ರಾಜ್ಯದ ಗ್ಯಾಸ್ ಕೊರತೆ ಸಮಸ್ಯೆಯ ಗಂಭೀರತೆಯನ್ನು ತೋರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು