ಇತ್ತೀಚಿನ ಸುದ್ದಿ
ಬೃಹತ್ ಜನಸ್ತೋಮದ ಹರ್ಷೋದ್ಗಾರದ ನಡುವೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ
20/05/2023, 13:14
ಬೆಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಕಂಠೀರವ ಸ್ಟೇಡಿಯಖನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದರು. 2013ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ನೆರೆದಿದ್ದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು ಇತರ 8 ಮಂದಿ ಸಚಿವರು ಕೂಡ ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಡಾ. ಜಿ. ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್ ಸಚಿನರುಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.