2:04 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಕ್ರಿಯೆ: ಭಾರತ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

14/09/2022, 20:41

ಹೊಸದಿಲ್ಲಿ(reporterkarnataka.com): ಸುದೀರ್ಘ ಅವಧಿಗೆ ಬ್ರಿಟನ್‌ ರಾಣಿಯಾಗಿದ್ದ ಎಲಿಜಬೆತ್‌ II ಅವರ ಅಂತ್ಯಕ್ರಿಯೆಗೆ ಸೆಪ್ಟೆಂಬರ್‌ 19ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿ ಜಗತ್ತಿನ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅದೇ ರೀತಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕ್ವೀನ್‌ ಎಲಿಜಬೆತ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸರ್ಕಾರದ ಪರವಾಗಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್‌ 18ರಿಂದ 19ರವರೆಗೆ ದ್ರೌಪದಿ ಮುರ್ಮು ಅವರು ಲಂಡನ್‌ನಲ್ಲಿ ನಡೆಯುವ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಸುಮಾರು 70 ವರ್ಷಗಳ ಕಾಲ ಬ್ರಿಟನ್‌ ರಾಣಿಯಾಗಿದ್ದ ಕ್ವೀನ್‌ ಎಲಿಜಬೆತ್‌ II ಅವರು ಸೆಪ್ಟೆಂಬರ್‌ 8ರಂದು ನಿಧನರಾಗಿದ್ದಾರೆ. ಈಗ ಅವರ ಉತ್ತರಾಧಿಕಾರಿಯನ್ನಾಗಿ ಚಾರ್ಲ್ಸ್‌ III ಅವರನ್ನು ನೇಮಿಸಲಾಗಿದೆ. ಬ್ರಿಟನ್‌ ರಾಣಿಯ ನಿಧನಕ್ಕೆ ಜಗತ್ತೇ ಕಂಬನಿ ಮಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು