11:06 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಒಡೆದ ಕುಡಿಯುವ ನೀರು ಪೈಪ್ ಲೈನ್ | ದುರಸ್ತಿ ಕಾರ್ಯ ವಿಳಂಬ: ಪಾಲಿಕೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಶಾಸಕದ್ವಯರು

19/11/2025, 23:01

ಮಂಗಳೂರು(reporterkarnataka.com): ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ರವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಅಂತ್ಯಗೊಂಡು ಒಂದು ವರ್ಷವಾಗುತ್ತಾ ಬಂದಿದ್ದು ಸದ್ಯ ಯಾವುದೇ ಚುನಾಯಿತ ಪ್ರತಿನಿಧಿಗಳಿಲ್ಲದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತಾಧಿಕಾರಿ ಮೂಲಕ ಆಡಳಿತ ನಡೆಸುತ್ತಿದೆ. ಹೀಗಿರುವಾಗ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಅದಕ್ಕೆ ತಕ್ಷಣ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಒಂದು ದಿನದೊಳಗೆ ದುರಸ್ತಿಗೊಳಿಸಬಹುದಾದ ಕಾರ್ಯವು ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಮೂರು ದಿನ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದಾಗಿ ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದೇ ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ ಎಂದರು.

ಕೊನೆಪಕ್ಷ ಟ್ಯಾಂಕರ್ ಮೂಲಕವೂ ನೀರು ಪೂರೈಕೆಗೆ ಕ್ರಮ ಕೈಗೊಳ್ಳದಿರುವುದು ಪಾಲಿಕೆಯ ಬೇಜವಾಬ್ದಾರಿಯ ಪರಮಾವಧಿಯಾಗಿದೆ. ಲೋಡ್ ಶೆಡ್ಡಿಂಗ್ ನಿಂದಾಗಿ ನೀರಿನ ಒತ್ತಡ ಕಡಿಮೆಯಾಗುವ ಕಾರಣ ಹಲವು ಮನೆಗಳಿಗೆ ನೀರು ತಲುಪುತ್ತಿಲ್ಲ. ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಸಮಸ್ಯೆಗಳಿಗೆ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಶೀಘ್ರ ಸ್ಪಂದನೆ ಸಿಗುತ್ತಿತ್ತು. ಈಗ ಇಲ್ಲಿನ ಅವ್ಯವಸ್ಥೆಯಿಂದಾಗಿ ಜನಸಾಮಾನ್ಯರು ಪರದಾಡುವಂತಾಗಿದೆ. ಇದೀಗ ನಾವೇ ಸ್ವತಃ ಸ್ಥಳಕ್ಕೆ ಭೇಟಿ ನೀಡಿದ್ದು 19 ನೇ ತಾರೀಕು ಬುಧವಾರ ರಾತ್ರಿಯೊಳಗೆ ಎಲ್ಲ ದುರಸ್ತಿ ಕಾರ್ಯ ಸಂಪೂರ್ಣಗೊಳಿಸುವುದಾಗಿ ಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು