4:56 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

BSY B’day | ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ

27/02/2025, 23:21

ಬೆಂಗಳೂರು(reporterkarnataka.com): ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಯುಡಿಯೂರಪ್ಪ ಅವರ 83 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದಿದ್ದರು. ಅಧಿಕಾರಕ್ಕೆ ಬಂದ ಮೇಲೆ‌ ಎಲ್ಲ ಸಮುದಾಯಗಳಿಗೂ ‌ಕಾರ್ಯಕ್ರಮ ಕೊಟ್ಟರು. ಕೆಳಲಸ್ತರವರಿಗೆ, ಬಡವರಿಗೆ, ಮಹಿಳೆಯರು, ಮಕ್ಕಳಿಗೆ, ರೈತರಿಗೆ ಕಾರ್ಯಕ್ರಮ ಕೊಟ್ಟರು. ಜನ ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಬಯಸುತ್ತಿದ್ದಾರೆ. ಇವತ್ತು ಕಾಂಗ್ರೆಸ್ ದುರಾಡಳಿತ ದೂರ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಅನೇಕ ನಾಯಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು