3:21 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್

05/05/2026, 15:29

ಧಾರವಾಡ(reporterkarnataka.com): ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಎಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಸನ್ಯಾಸಿಯ ಶವ ಪತ್ತೆಯಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಕಳೆದ ಏಪ್ರಿಲ್ 29ರಂದು ಧಾರವಾಡದ ಹಳಿಯಾಳ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೌದ್ಧ ಸನ್ಯಾಸಿಯೊಬ್ಬರ ಶವ ಪತ್ತೆಯಾಗಿತ್ತು. ಮೃತದೇಹದ ಮೇಲೆ ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಇದು ವ್ಯವಸ್ಥಿತವಾಗಿ ನಡೆದ ಕೊಲೆ ಎಂಬ ಅನುಮಾನ ವ್ಯಕ್ತವಾಗಿತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು.
ಪೊಲೀಸರು ತಾಂತ್ರಿಕ ದಾಖಲೆಗಳು ಮತ್ತು ಖಚಿತ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿದಾಗ, ಆರೋಪಿಗಳು ನೆರೆರಾಜ್ಯ ಮಹಾರಾಷ್ಟ್ರದಲ್ಲಿ ಅಡಗಿರುವ ಸುಳಿವು ಲಭ್ಯವಾಗಿತ್ತು. ತಕ್ಷಣವೇ ಕೊಲ್ಹಾಪುರಕ್ಕೆ ತೆರಳಿದ ಧಾರವಾಡ ಗ್ರಾಮೀಣ ಪೊಲೀಸರ ತಂಡ, ಅಲ್ಲಿ ಅಡಗಿದ್ದ ಮೂವರು ಪ್ರಮುಖ ಆರೋಪಿಗಳನ್ನು ಸಿನಿಮೀಯ ಶೈಲಿಯಲ್ಲಿ ಅರೆಸ್ಟ್ ಮಾಡಿದೆ. ಬಂಧಿತರನ್ನು ಸದ್ಯ ಧಾರವಾಡಕ್ಕೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ತನಿಖೆಯಲ್ಲಿ ಐವರಿಂದ ಸನ್ಯಾಸಿ ಕೊಲೆಯಾಗಿದೆ ಎಂದು ಗೊತ್ತಾಗಿದೆ. ಮೂವರು ಹಂತಕರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಅರೆಸ್ಟ್ ಆಗಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸಂಕೇತ್ ಯಾದವ್, ವೈಭವ್ ಚವ್ಹಾನ್, ಸಿದ್ದೇಶ್ ಬೋಸ್ಲೆ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು