ಇತ್ತೀಚಿನ ಸುದ್ದಿ
ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳ ಸರಳೀಕರಣ: ಗಣಿ ಮತ್ತು ಭೂವಿಜ್ಞಾನ ಸಚಿವರ ಜತೆ ಶಾಸಕ ಕಾಮತ್ ಸಭೆ
04/08/2022, 21:22

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಕ್ರಷರ್ ಹಾಗೂ ಬಿಲ್ಡಿಂಗ್ ಸ್ಟೋನ್ ಗಳ ಲಭ್ಯತೆಯ ಕುರಿತಂತೆ ನಿಯಮಾವಳಿಗಳನ್ನು ಸರಳೀಕರಣಗೊಳಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡುವ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ ರಮೇಶ್ ಟಿ.ಎಸ್, ಜಂಟಿ ನಿರ್ದೇಶಕರಾದ ಲಕ್ಷ್ಮಮ್ಮ, ರಾಜ್ಯ ಕ್ವಾರಿ ಮಾಲಕರ ಸಂಘದ ಅದ್ಯಕ್ಷರಾದ ರವೀಂದ್ರ ಶೆಟ್ಟಿ ಕಾರ್ಕಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕ್ವಾರಿ ಮಾಲಕರ ಸಂಘದ ಅಧ್ಯಕ್ಷರಾದ ಮನೋಜ್ ಶೆಟ್ಟಿ, ರಾಜ್ಯದ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.