5:24 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ

02/02/2026, 18:17

ತಿರುವನಂತಪುರಂ(reporterkarnataka.com): ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ರಾಯ್ ಅವರ ಸಾವು ನಾಗರಿಕ ಸಮಾಜ ಮತ್ತು ಉದ್ಯಮ ರಂಗವನ್ನು ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಸಾವನ್ನು ದೇಶದ ತೆರಿಗೆ ಆಡಳಿತದ ಮೇಲಿನ ಕಪ್ಪು ಚುಕ್ಕೆ ಎಂದು ವಿಜಯನ್ ಬಣ್ಣಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿಯ ಸಂದರ್ಭದಲ್ಲಿ ಪಾಲಿಸಬೇಕಾದ ಕನಿಷ್ಠ ಶಿಷ್ಟಾಚಾರಗಳನ್ನು ಗಾಳಿಗೆ ತೂರಿದ್ದಾರೆ. ವರದಿಗಳ ಪ್ರಕಾರ, ಐಟಿ ಪರಿಶೀಲನೆ ನಡೆಯುತ್ತಿದ್ದಾಗಲೇ ರಾಯ್ ಅವರು ಪಕ್ಕದ ಕೋಣೆಗೆ ತೆರಳಿ ತಮ್ಮ ಪರವಾನಗಿ ಪಡೆದ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ತನಿಖೆ ವೇಳೆಯೇ ಒಬ್ಬ ಉದ್ಯಮಿ ಪಿಸ್ತೂಲಿನಿಂದ ಶೂಟ್ ಮಾಡಿಕೊಳ್ಳಲು ಹೇಗೆ ಸಾಧ್ಯವಾಯಿತು? ಇದು ಭದ್ರತಾ ವ್ಯವಸ್ಥೆಯ ಗಂಭೀರ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಸಿ.ಜೆ. ರಾಯ್ ಅವರ ಈ ಹಠಾತ್ ಸಾವು ಕೇರಳ ಮತ್ತು ಕರ್ನಾಟಕದ ಉದ್ಯಮ ವಲಯದಲ್ಲಿ ಆತಂಕ ಮೂಡಿಸಿದೆ. ಒಬ್ಬ ಯಶಸ್ವಿ ಉದ್ಯಮಿಯನ್ನು ಈ ಮಟ್ಟದ ನಿರ್ಧಾರಕ್ಕೆ ತಳ್ಳಿದ ಸಂದರ್ಭಗಳೇನು ಎಂಬುದನ್ನು ಪತ್ತೆಹಚ್ಚಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಯಾಗಬೇಕು ಎಂದು ಕೇರಳ ಸರ್ಕಾರ ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು