10:51 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ ಓಡಿ ಎಸ್ಕೇಪ್!

31/03/2026, 10:34

ಬಾಗಲಕೋಟೆ(reporterkarnataka.com):ಸಿಎಂ ಭಾಗಿಯಾಗಿದ್ದ ಉಪ ಚುನಾವಣೆ ಸಭೆಯಲ್ಲಿ ಪಾಲ್ಗೊಂಡಿದ್ದ ಸರಕಾರಿ ಶಾಲಾ ಶಿಕ್ಷಕರೊಬ್ಬರು ತನ್ನ ಗುರುತು ಬಹಿರಂಗಗೊಳ್ಳುತ್ತಿದ್ದಂತೆ ಮುಖ ಮುಚ್ಚಿಕೊಂಡು ಕಬ್ಬಿನ ಗದ್ದೆಯೊಳಗೆ ಓಡಿ ಪರಾರಿಯಾದ ಘಟನೆ ಸುತಗುಂಡಾರ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೃಹತ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಎಮ್‌ಪಿಎಸ್ (MPS) ಶಾಲೆಯ ಸಹ ಶಿಕ್ಷಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಚಂದ್ರು ನುಗ್ಲಿ ಸಭೆಯಲ್ಲಿ ಭಾಗಿಯಾಗಿದ್ದರು. ಸರ್ಕಾರಿ ನೌಕರರಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು ನೀತಿ ಸಂಹಿತೆಯ ನೇರ ಉಲ್ಲಂಘನೆಯಾಗಿದ್ದರೂ, ಅಲ್ಲಿ ಕಾಣಿಸಿಕೊಂಡಿದ್ದು ಆಘಾತಕಾರಿ.

ಈ ವೇಳೆ ಸಭೆಯಲ್ಲಿದ್ದ ಕೆಲವರು ಶಿಕ್ಷಕ ಚಂದ್ರು ನುಗ್ಲಿ ಅವರನ್ನು ಗುರುತಿಸಿ ತಮ್ಮ ಮೊಬೈಲ್ ಫೋನ್‌ಗಳಲ್ಲಿ ವಿಡಿಯೋ ಮಾಡಲು ಪ್ರಾರಂಭಿಸಿದರು. ಸಿಕ್ಕಿಬೀಳುತ್ತಿದ್ದಂತೆ, ಎಚ್ಚೆತ್ತುಕೊಂಡ ನುಗ್ಲಿ, ತಕ್ಷಣವೇ ತಮ್ಮ ಮುಖವನ್ನು ಮುಚ್ಚಿಕೊಂಡು, ಮಾಸ್ಕ್ ಧರಿಸಿ ಅಲ್ಲಿಂದ ಎಸ್ಕೇಪ್‌ ಆಗಲು ಪ್ರಯತ್ನಿಸಿದರು. ವಿಡಿಯೋ ಮಾಡುವುದನ್ನು ಮುಂದುವರೆಸಿದಾಗ ಅಲ್ಲಿಂದ ಕಾಲ್ಕಿತ್ತ ಅವರು, ಪಕ್ಕದಲ್ಲೇ ಇದ್ದ ಕಬ್ಬಿನ ಹೊಲದೊಳಗೆ ಓಡಿ ಹೋಗುವ ಮೂಲಕ ಅಲ್ಲಿಂದ ಪಾರಾಗಿದ್ದಾರೆ. ಈ ದೃಶ್ಯಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.

*ಉಪಚುನಾವಣಾ ಕದನ:* ಪ್ರಸ್ತುತ ಕರ್ನಾಟಕದಲ್ಲಿ ಬಾಗಲಕೋಟೆ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಅವರ ಪುತ್ರ ಉಮೇಶ್ ಮೇಟಿ ಸ್ಪರ್ಧಿಸಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಆಡಳಿತ ಪಕ್ಷವು ತನ್ನ ಶಕ್ತಿ ಪ್ರದರ್ಶನ ಮಾಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಶಿಕ್ಷಕರು ರಾಜಕೀಯ ಪ್ರಚಾರದಲ್ಲಿ ಭಾಗಿಯಾಗುತ್ತಿರುವುದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

*ಶಿಕ್ಷಕನ ಮೇಲೆ ಕ್ರಮವೇನು* ಸರ್ಕಾರಿ ಸೇವಾ ನಿಯಮಗಳ ಪ್ರಕಾರ ಯಾವುದೇ ಸರ್ಕಾರಿ ನೌಕರ ರಾಜಕೀಯ ಪಕ್ಷದ ಪರ ಪ್ರಚಾರ ಮಾಡುವಂತಿಲ್ಲ. ಈಗ ಚಂದ್ರು ನುಗ್ಲಿ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವುದು ನಿಯಮ ಉಲ್ಲಂಘನೆ. ಅಲ್ಲದೆ, ಇದಕ್ಕೆ ವಿಡಿಯೋ ಸಾಕ್ಷ್ಯಗಳು ಲಭ್ಯವಿರುವುದರಿಂದ, ಚುನಾವಣಾ ಆಯೋಗ ಮತ್ತು ಶಿಕ್ಷಣ ಇಲಾಖೆ ಇವರ ವಿರುದ್ಧ ಯಾವ ರೀತಿ ಶಿಸ್ತು ಕ್ರಮ ಜರುಗಿಸುತ್ತದ ಅಂತ ಕಾಯ್ದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು