7:35 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉಪ ಚುನಾವಣೆ | ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

23/03/2026, 21:10

ಬಾಗಲಕೋಟೆ(reporterkarnataka.com): ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಪಕ್ಷ ಜಯ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಜ್ಜಾಗಿದ್ದೇವೆ ಎಂದು ಹೇಳಿದರು.
ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ ಮತ್ತು ಜನತಾ ದಳ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗೆಲ್ಲಬೇಕೆಂಬ ಸಂಕಲ್ಪ ಮಾಡಿಕೊಂಡಿವೆ ಎಂದು ಅವರು ತಿಳಿಸಿದರು. ಬಾಗಲಕೋಟೆ ಕ್ಷೇತ್ರದ ಮತದಾರರು ಬದಲಾವಣೆ ಬಯಸುತ್ತಿದ್ದು, ಮತ್ತೊಮ್ಮೆ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಬೇಕೆಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.
ಎರಡು ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ಎಷ್ಟೇ ಪ್ರಯತ್ನಪಟ್ಟರೂ ಬಿಜೆಪಿ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು