3:06 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

06/04/2026, 14:59

ಬೆಂಗಳೂರು(reporter Karnataka.com);ಉಪ ಚುನಾವಣೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿದ್ದೆಗೆಡಿಸಿವೆ. ಗಲಿಬಿಲಿಗೊಂಡು ಪರದಾಡುತ್ತಿರುವ ಸಿದ್ದರಾಮಯ್ಯ ಅವರು ಬಾಗಲಕೋಟೆ ಅಥವಾ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಪೈಕಿ ಯಾವುದನ್ನು ಉಳಿಸಿಕೊಳ್ಳಬೇಕು ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ‌.ವೈ.ವಿಜಯೇಂದ್ರ ಹೇಳಿದರು.
’17 ಬಾರಿ ಬಜೆಟ್ ಮಂಡಿಸಿದ ಅನುಭವ ಇರುವ ಸಿದ್ದರಾಮಯ್ಯ ಅವರು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ವಿಫಲವಾಗಿದ್ದಾರೆ. ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಹೇಳುತ್ತಾ ಅಭಿವೃದ್ಧಿ ಕೆಲಸಗಳನ್ನೇ ಮರೆತಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
‘ಅಹಿಂದ ಹೆಸರೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯಗಳನ್ನು ಯಾವತ್ತೋ ಮರೆತಿದ್ದಾರೆ. ಇದೀಗ ಅಲ್ಪಸಂಖ್ಯಾತರನ್ನೂ ಅವರು ಮರೆತಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ’ ಎಂದರು.
‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮುಖವಾಡ ಧರಿಸಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸವನ್ನು ಮಾಡುತ್ತಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿ ಪರಿವರ್ತನೆಯಾಗಿವೆ’ ಎಂದು ಹೇಳಿದರು.
‘ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಿದ್ದೇನೆ. ಬಿಜೆಪಿಯ ಕಾರ್ಯಕರ್ತರು ಪ್ರತಿ ಬೂತ್ ಮಟ್ಟದಲ್ಲಿ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಎಲ್ಲಾ ಮುಖಂಡರು ಒಟ್ಟುಗೂಡಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ಎರಡೂ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್ ಗೆಲುವಿನ ನಾಗಾಲೋಟಕ್ಕೆ ಈ ಬಾರಿ ತಡೆ ಬೀಳುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಯಾರು ಬಂದು ಹೋದ್ರು, ಯಾರು ಬರಲಿಲ್ಲ ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದು ಬಿಜೆಪಿಗೆ ವರವಾಗಲಿದೆ. ಕಾಂಗ್ರೆಸ್‌ ಮುಸ್ಲಿಮರ ಪರ ಮೊಸಳೆ ಕಣ್ಣೀರು ಹಾಕುತ್ತಿದೆ ಎಂಬುದು ಅಲ್ಪಸಂಖ್ಯಾತರಿಗೂ ಅರಿವಾಗುತ್ತಿದೆ. ಹೀಗಾಗಿ ಮುಸ್ಲಿಮರೂ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ’ ಎಂದರು.
‘ಬಿಜೆಪಿಯು ಯಾವತ್ತೂ ಅಲ್ಪಸಂಖ್ಯಾತರ ವಿರೋಧಿಯಲ್ಲ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಾರಿ ಹೇಳಿದ್ದಾರೆ, ಅದರಂತೆ ನಡೆದುಕೊಂಡಿದ್ದಾರೆ. 2047ರ ವೇಳೆಗೆ ದೇಶ ಅಭಿವೃದ್ಧಿಗೊಳ್ಳಲು ಎಲ್ಲರ ಪಾಲು ಇದೆ ಎಂಬುದನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ನಂಬಿದ್ದಾರೆ’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು