4:16 PM Tuesday22 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ…

ಇತ್ತೀಚಿನ ಸುದ್ದಿ

ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ: ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳು ಕೇರಳದಲ್ಲಿ ಬಂಧನ

22/07/2025, 16:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ “ಹನಿ ಟ್ರ್ಯಾಪ್” ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲೆಯ ನಾಪೋಕ್ಲು ಕುಂಜಿಲ ನಿವಾಸಿ ಸೈಫ್ ಮತ್ತು ಮಂಡ್ಯ ಮೂಲದ ಯುವತಿ ಕವನಾಳನ್ನು ಬಂಧಿಸಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಪಿರಿಯಾಪಟ್ಟಣದ ಕಂಪಲಾ ಪುರ ಬಟ್ಟೆ ಅಂಗಡಿ ಮಾಲೀಕ ಒಬ್ಬನನ್ನು ಹನಿ ಟ್ರ್ಯಾಪ್ ಮಾಡಿ ಲಕ್ಷಾಂತರ ಹಣ ವಸೂಲಿ ಮಾಡಿದ ನಂತರ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಬೈಲುಕುಪ್ಪೆ ಪೊಲೀಸ್ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಕೇರಳದ ಕಣ್ಣೂರು ಬಳಿ ಲಾಡ್ಜ್ ವೊಂದರಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹುಣಸೂರು ಪೊಲೀಸ್ ಠಾಣೆಯ ಪೇದೆ ಶಿವಣ್ಣ ಮತ್ತು ಮೂರ್ತಿ ಎಂಬುವವರನ್ನು ಈ ಹಿಂದೆ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಬಟ್ಟೆ ಅಂಗಡಿ ಮಾಲೀಕ ನಿಂದ 10 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಲಾಗಿತ್ತು. ಬಂಧಿತರನ್ನು ಮೈಸೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು