8:26 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಬೈಂದೂರು: ಕಾಲ್ತೋಡು ಗ್ರಾಮದಲ್ಲಿ ಕಾಲುಸಂಕದಿಂದ ಹಳ್ಳಕ್ಕೆ ಬಿದ್ದು ಶಾಲಾ ಬಾಲಕಿ ನೀರುಪಾಲು

08/08/2022, 20:52

ಬೈಂದೂರು(reporterkarnataka.com):ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಎರಡನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ.

ಚಪ್ಪರಿಕೆ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ, ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7 ) ನೀರುಪಾಲಾದ ಬಾಲಕಿ.

ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಬಾಲಕಿ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಈ ಹಳ್ಳ ಬೋಳಂಬಳ್ಳಿ ನದಿಗೆ ಸೇರುತ್ತಿದ್ದು, ನೀರಿನ ಸೆಳೆತಕ್ಕೆ ಮಗು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಪತ್ತೆಯಾದ ಬಾಲಕಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ, ಎಸ್.ಐ ಪವನ್ ನಾಯ್ಕ್ ಮೊದಲಾದವರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು