ಇತ್ತೀಚಿನ ಸುದ್ದಿ
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ
06/03/2026, 15:57
ಬೆಂಗಳೂರು(reporter Karnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇಸಾಲಿನ ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾದ ಬದಲಾವಣೆಯನ್ನು ಘೋಷಿಸಿದ್ದಾರೆ.
ಸುಮಾರು ಮೂರು ದಶಕಗಳ ಬಳಿಕ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ಯಾಂಪಸ್ ಪಾಲಿಟಿಕ್ಸ್’ ಮರಳಲು ವೇದಿಕೆ ಸಿದ್ಧವಾಗಿದೆ.
*ವಿದ್ಯಾರ್ಥಿ ಸಂಘಗಳ ಚುನಾವಣೆ ಪುನಾರಂಭ:*
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳು ಮತ್ತುವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪುನಃ ನಡೆಸಲು ಸರ್ಕಾರ ನಿರ್ಧರಿಸಿದೆ.
.












