12:56 AM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ ಉದ್ಘಾಟನೆ

30/03/2023, 22:55

ಮಂಗಳೂರು(reporterkarnataka.com): ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ,ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ ಅಸ್ವಸ್ಥರು, ಬಾಲ ಕಾರ್ಮಿಕರು ಹೀಗೆ ಸಾಕಷ್ಟು ಮಂದಿ ಅವಕಾಶವಂಚಿತರಿದ್ದಾರೆ. ಆದರೆ ಅವಕಾಶಗಳ ನಡುವೆ ಬದುಕುತ್ತಿರುವ ಅದೃಷ್ಟವಂತರಾದ ನಾವು ನಮ್ಮ ಸಾಮಥ್ಯವನ್ನು ಅಭಿವೃದ್ಧಿಗೆ ಬಳಸಿಕೊಳ್ಳುವ ಮೂಲಕ ವ್ಯಕ್ತಿತ್ವದ ಜತೆಗೆ ಸಾಂಸ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ಮಂಗಳೂರಿನ ಸ್ವಸ್ತಿಕ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ, ಸ್ವಸ್ತಿಕ್ ಕನ್ಸಲ್ಟೆನ್ಸಿ ಸರ್ವಿಸ್ ನ ಸಿ.ಒ.ಒ. ಡಾ.ರಾಘವೇಂದ್ರ ಹೊಳ್ಳ ಎನ್. ಹೇಳಿದರು.
ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವವನ್ನು ದೀಪಪ್ರಜ್ವಲನದೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಬೆಂಜನಪದವು ಪರಿಸರದಲ್ಲಿ ಎರಡೂವರೆ ದಶಕಗಳ ಹಿಂದೆ ಇಂಜಿನಿಯರಿಂಗ್ ಕಾಲೇಜನ್ನು ಆರಂಭಿಸುವ ಮೂಲಕ ಈ ಭಾಗದ ಯುವಜನತೆಗೆ ತಾಂತ್ರಿಕ ಶಿಕ್ಷಣ, ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದ ಕೆನರಾ ಶಿಕ್ಷಣ ಸಂಸ್ಥೆ ಇದೀಗ ವಿಕಾಸದ ಹಾದಿಯಲ್ಲಿದ್ದು ಮುಂದಿನ ದಿನಗಳಲ್ಲಿ ವಿಶ್ವವಿದ್ಯಾನಿಲಯವಾಗಿ ಬೆಳೆಯುವಂತಾಗಲಿ ಎಂದವರು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ. ವಾಸುದೇವ ಕಾಮತ್ ಶುಭ ಹಾರೈಸಿದರು.
ಕಾಲೇಜು ಸಂಚಾಲಕ, ಆಡಳಿತ ಮಂಡಳಿ ಕಾರ್ಯದರ್ಶಿ ಎಂ. ರಂಗನಾಥ ಭಟ್ ಮಾತನಾಡಿ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿಗಳಾದ ಟಿ. ಗೋಪಾಲಕೃಷ್ಣ ಶೆಣೈ, ಕೆ.ಸುರೇಶ್ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಆಕೃತಿ ಉತ್ಸವದ ಪ್ರಧಾನ ಸಮನ್ವಯಕಾರ ನವೀನ್ ಎ.ಕಲಾಲ್,ವಿದ್ಯಾರ್ಥಿ ಸಮನ್ವಯಕಾರರಾದ ಶ್ರೀಹರಿ ಭಟ್, ವಿಘ್ನೇಶ್ ಕಾಮತ್,ತಾರಾ ಕಾಮತ್ ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ಪ್ರಣೀತ್ ಶೆಟ್ಟಿ,ಉಪಾಧ್ಯಕ್ಷ ವಿಜಯರಾಜ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ವಾರ್ಷಿಕ ವರದಿ ವಾಚಿಸಿದರು. ಸಹ ಪ್ರಾಧ್ಯಾಪಕಿ ಕ್ಯಾರಲ್ ಡಿ.ಮೆಲ್ಲೋ ಅತಿಥಿಯನ್ನು ಪರಿಚಯಿಸಿದರು. ಪ್ರತಿಭಾನ್ವಿತರು,ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿ ಕೌನ್ಸಿಲ್ ಜತೆ ಕಾರ್ಯದರ್ಶಿ ಆಶಯ್ ಶೆಟ್ಟಿ ಸಾಧಕ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಎ.ಐ.ಎಂ.ಎಲ್ ವಿಭಾಗ ಮುಖ್ಯಸ್ಥ ಡಾ.ಬಸಪ್ಪ ಬಿ. ಕೊಡದ ಸ್ವಾಗತಿಸಿದರು. ವಿದ್ಯಾರ್ಥಿ ಕೌನ್ಸಿಲ್ ಕಾರ್ಯದರ್ಶಿ ಆದಿತ್ಯ ಪೈ ವಂದಿಸಿದರು. ವಿದ್ಯಾರ್ಥಿಗಳಾದ ವಿಘ್ನೇಶ್ ಭಕ್ತ, ಮೇಘಶ್ರೀ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭಕ್ಕೂ ಮೊದಲು ಕಾಲೇಜಿನ ಅಕಾಡೆಮಿಕ್ ಬ್ಲಾಕ್ನಲ್ಲಿ ನೂತನ ಸೆಮಿನಾರ್ ಹಾಲ್, ಡೀನ್ಸ್ ಕ್ಯಾಬಿನ್ಸ್, ಸ್ಕಿಲ್ ಲ್ಯಾಬ್ ಸಹಿತ ನವೀಕೃತ ಲ್ಯಾಬ್ ಗಳನ್ನು ಗಣ್ಯರು ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು