9:45 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ‘ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ’  ವಿಚಾರ ಸಂಕಿರಣ

20/08/2021, 21:33

ಮಂಗಳೂರು(reporterkarnataka.com) ಸದ್ಭಾವನ ದಿನಾಚರಣೆಯ ಅಂಗವಾಗಿ ನಗರದ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು “ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ” ಎಂಬ  ವಿಚಾರ ಸಂಕಿರಣವನ್ನು ಆಯೋಜಿಸಿತ್ತು.   

ಈ ಆನ್ಲೈನ್ ಕಾರ್ಯಾಗಾರದಲ್ಲಿ  ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಚನ್ನ ಗಿರಿ  ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ಕನ್ನಡ ವಿಭಾಗದ  ಪ್ರಾಧ್ಯಾಪಕ ಷಣ್ಮುಖ ಕೆ. ಎಚ್, ಸಂವಿಧಾನದ ರೀತಿ ನೀತಿಗಳು, ಹಕ್ಕು ಮತ್ತು ಕರ್ತವ್ಯಗಳು,

ಅದರ ಗುರಿ ಮತ್ತು ಉದ್ದೇಶ, ಅದನ್ನು ಜನಸಾಮಾನ್ಯರು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಉದಾಹರಣೆಯಾಗಿ ನೀಡಿ ಹಾಗೆ ಇತಿಹಾಸವನ್ನು ಸಹ ಆಧಾರವಾಗಿಟ್ಟುಕೊಂಡು ಪ್ರಸ್ತುತ ಸಮಾಜದ ಸ್ಥಿತಿಗತಿಯ ಬಗ್ಗೆ ಕೂಲಂಕುಶವಾಗಿ ಹೇಳಿದರು. 

“ಮನುಷ್ಯ ಜಾತಿ ತಾನೊಂದೆ ವಲಂ” ಎಂಬ ಪಂಪನ ಮಾತಿನಂತೆ ರಾಷ್ಟ್ರೀಯ ಭಾವೈಕ್ಯತೆಯು  ಪ್ರತಿಯೊಬ್ಬರಲ್ಲೂ ಮೂಡಬೇಕು,ಶಿಕ್ಷಕರು ಮತ್ತು ಪೋಷಕರ ಪಾತ್ರ ಭಾವೈಕ್ಯತೆ ಮೂಡಿಸುವಲ್ಲಿ ಬಹುಮುಖ್ಯ ಎಂಬುದನ್ನು ತಿಳಿಸಿದ್ದರು.  ಸೌಹಾರ್ದತೆ, ಸದ್ಭಾವನೆ ಇತ್ಯಾದಿಗಳೆಲ್ಲಾ ಈಗಿನ ದಿನಕ್ಕೆ ಅತಿ ಅಗತ್ಯವಾದದ್ದು. ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆಗಳ ಹೆಸರಿನಲ್ಲಿ ಒಡೆದು ಹೋಗುತ್ತಿರುವ ನಮ್ಮ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಗಳು. ದೇಶದ ಪ್ರತಿಯೊಬ್ಬ ಪ್ರಜೆಗಳು ಈ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ದೇಶ ವಿಶ್ವದಲ್ಲಿಯೇ ಒಂದು ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ.ಅದೇ ರೀತಿ ಜೀವ ವೈವಿಧ್ಯತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಹಲವಾರು ಮಾಹಿತಿಯನ್ನು ನೀಡಿದರು.  

ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು  ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ವಹಿಸಿದ್ದರು. ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಚಾರ ಸಂಕಿರಣದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಈ ವಿಚಾರ ಸಂಕಿರಣದ  ಪ್ರಾಮುಖ್ಯತೆಯನ್ನು ತಿಳಿಸುತ್ತಾ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಇನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ ಕೆ.ಸ್ವಯಂಸೇವಕರಿಗೆ ಸದ್ಭಾವನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ವಯಂಸೇವಕ  ಅನಂತ ಕೃಷ್ಣ ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕ ಪರಶುರಾಮ  ಕಾರ್ಯಕ್ರಮ ನಿರ್ವಹಿಸಿದರು.


ಕೆನರಾ ಕಾಲೇಜು, ಮಂಗಳೂರು ಮತ್ತು  ಶ್ರೀ ಶಿವಲಿಂಗೇಶ್ವರ  ಸ್ವಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಗಿರಿ ಇದರ ರಾಸೆ ಯೋಜನಾ ಸ್ವಯಂಸೇವಕರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು