10:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ 2ನೇ ಡೊಸ್ ಕೋವಿಡ್ ಲಸಿಕೆ ಅಭಿಯಾನ ; 300 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

09/08/2021, 22:24

ಮಂಗಳೂರು(reporterkarnata.com): ದ.ಕ.ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ 3ನೇ ಹಂತದ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಸೋಮವಾರ ಕಾಲೇಜಿನಲ್ಲಿ ಜರುಗಿತು.


ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಲಸಿಕಾ ಅಭಿಯಾನಕ್ಕೆ ಭೇಟಿ ನೀಡಿ ಕೋವಿಡ್ ನಿಯಮ ಪಾಲನೆ ವೀಕ್ಷಿಸಿ, ಸಾಮಾಜಿಕ ಅಂತರ , ಮಾಸ್ಕ್ ಧರಿಸಿ ನಿಯಮ ಪಾಲಿಸಿ ಸುರಕ್ಷತೆ ಯನ್ನು ಕಾಪಾಡಿದ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಸಿಬ್ಬಂದಿಗಳಿಗೆ ಅಭಿನಂದಿಸಿದರು.


ಬಂದರು ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ.ಚಂದ್ರಪ್ರಭಾ,ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್. ಯುವ ರೆಡ್ ಕ್ರಾಸ್ ನ ಅಧಿಕಾರಿ ಸ್ಮಿತಾ ಎಂ, ರೂಪಶ್ರೀ ಕೆ.ಪಿ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕದ ಅಧಿಕಾರಿ ಕಾರ್ತಿಕ್ ಮುಂತಾದವರು ಉಪಸ್ಥಿತರಿದ್ದರು.

ಸುಮಾರು 300 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆಯ ಎರಡನೇ ಡೊಸ್ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು