7:45 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಎನ್‌ಸಿಸಿ ನೌಕದಳದ ಕ್ಯಾಡೆಟ್ ಆಗಿ ಮಂಗಳೂರು ವಿವಿ ಕಾಲೇಜಿನ ಕ್ಯಾಪ್ಟನ್ ಶ್ರೀನಿವಾಸ್ ಪಿ. ನೇಮಕ

30/12/2025, 20:06

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸೀನಿಯರ್ ಕ್ಯಾಡೆಟ್ ಕ್ಯಾಪ್ಟನ್ ಶ್ರೀನಿವಾಸ್ ಪಿ., 5 KAR ಎನ್‌ಸಿಸಿ ನೌಕದಳದ ಕ್ಯಾಡೆಟ್ ಆಗಿ ನೇಮಕಗೊಂಡಿದ್ದಾರೆ.
ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಡೈರೆಕ್ಟೋರೇಟ್ ಜನರಲ್ ಎನ್‌ಸಿಸಿ ವತಿಯಿಂದ ಆಯೋಜಿಸಲಾಗುವ ಓವರ್‌ಸೀಸ್ ಡಿಪ್ಲಾಯ್‌ಮೆಂಟ್ ಕ್ಯಾಂಪ್‌ಗೆ (OSD)ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಈ ಗೌರವಾನ್ವಿತ ಅಂತಾರಾಷ್ಟ್ರೀಯ ನೌಕಾ ತರಬೇತಿ ಕಾರ್ಯಕ್ರಮಕ್ಕೆ ಕರ್ನಾಟಕ ಹಾಗೂ ಗೋವಾ ಡೈರೆಕ್ಟೋರೇಟ್‌ನಿಂದ ಆಯ್ಕೆಯಾದ ಏಕೈಕ ಕ್ಯಾಡೆಟ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
2026ರ ಜನವರಿ 7ರಿಂದ ಫೆಬ್ರುವರಿ 10ರವರೆಗೆ ಸಿಂಗಪುರ, ಇಂಡೋನೇಷ್ಯಾ ಹಾಗೂ ಥೈಲ್ಯಾಂಡ್ ದೇಶಗಳಲ್ಲಿ ನಡೆಯುವ ನೌಕದಳ ಸಂಬಂಧಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮಹತ್ವದ ಸಾಧನೆಯ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಕ್ಯಾಡೆಟ್‌ಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಈ ವೇಳೆ ಲೆಫ್ಟಿನೆಂಟ್ ಕಮಾಂಡರ್ ಪ್ರೊ. ಯತೀಶ್ ಕುಮಾರ್ (ನೌಕದಳ) ಅಧಿಕಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು