8:23 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

18/01/2026, 14:05

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೊರ ವಲಯದಲ್ಲಿರುವ ಶಿವರಾಜಪುರದಲ್ಲಿ ಸಣ್ಣ ಅಂಗಡಿ ಇಟ್ಟಕೊಂಡು ಮಾರುತಿ ವ್ಯಾನಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಕಾಯಕವನ್ನೂ ನಡೆಸುತ್ತಿದ್ದ ರಮೇಶ್ ಕಾರಿನ ಚಾಲಕನೊಬ್ಬನ ಅತೀ ವೇಗದ ನಿರ್ಲಕ್ಷ್ಯದ ಚಾಲನೆಯಿಂದಾಗಿ ತನ್ನದಲ್ಲದ ತಪ್ಪಿಗೆ ಪ್ರಾಣ ತೆತ್ತಬೇಕಾದ ದುರಂತ ಘಟನೆ ಬಾನುವಾರ ಶಿವರಾಜಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಮೇಶ್ ತನ್ನ ಮಾರುತಿ ವ್ಯಾನಿನಲ್ಲಿ ಊರಿನವರೊಬ್ಬರ ಮದುವೆ ಸಮಾರಂಭದ ಆಹ್ವಾನ ಪತ್ರಿಕೆ ವಿತರಿಸಲು ಇನ್ನೇನು ಕೆಲವೇ ಹೊತ್ತಲ್ಲಿ ಶಿವಮೊಗ್ಗದ ಕಡೆ ತೆರಳಬೇಕಾಗಿತ್ತು. ಈ ನಡುವೆ ಶಿವರಾಜಪುರದ ಆಗುಂಬೆ ರಸ್ತೆಯ ಬದಿಯಲ್ಲಿರುವ ತನ್ನ ಅಂಗಡಿಯ ಎದುರು ಕಾರನ್ನು ನಿಲ್ಲಿಸಿಕೊಂಡು ಕಾರಿನಲ್ಲಿ ಯಾವುದೋ ಅಂಗಡಿಯ ಐಟಮ್ ಗಳನ್ನು ತೆಗೆಯುವುದರಲ್ಲಿ ನಿರತವಾಗಿದ್ದಾಗ ಆಗುಂಬೆ ಕಡೆಯಿಂದ ಬರುತ್ತಿದ್ದ ಕಾರು ಏಕಾಏಕಿ ಎಡದಿಂದ ಸಂಪೂರ್ಣ ರಾಂಗ್ ಸೈಡ್‌ನಲ್ಲಿ ಬಲಕ್ಕೆ ನುಗ್ಗಿ ಬದಿಯಲ್ಲಿ ನಿಂತಿದ್ದ ಮಾರುತಿ ವ್ಯಾನ್ ಮತ್ತು ರಮೇಶನ ಮೇಲೆ ಅಪ್ಪಳಿಸಿ ಒಂದು ಅಮೂಲ್ಯ ಜೀವವನ್ನೇ ಬಲಿ ತೆಗೆದುಕೊಂಡಿತು.
ರಮೇಶ ಶ್ರಮಜೀವಿ. ಅತ್ಯಂತ ಸಾಧು ಸ್ವಭಾವದವರು. ಊರಿನ ಎಲ್ಲರೂ ಅವರನ್ನು ಪ್ರೀತಿಸುತ್ತಿದ್ದರು. ಇವರ ದುರಂತ ಸಾವಿಗೆ ಇವರ ಆತ್ಮೀಯರೆಲ್ಲರೂ ತೀವ್ರ ಕಂಬಿನಿ ಮಿಡಿದಿದ್ದಾರೆ. ಶಿವರಾಜಪುರದಲ್ಲಿ ಸ್ಮಶಾನ ಮೌನ ಆವರಿಸಿದೆ.
ಮಡದಿ , ಇಬ್ಬರು ಹೆಣ್ಣು ಮಕ್ಕಳು ಅಪಾರ ಬಂಧು ಬಳಗವನ್ನು ರಮೇಶ್ ಅಗಲಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು