3:32 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಅಂಬೇನಾಳಿ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಕಾರು: 8 ಯುವಕರ ಸಾವು; ಸಿಎಂ ಫಡ್ನವೀಸ್ ತೀವ್ರ ಆಘಾತ

25/05/2026, 22:21

ಮುಂಬೈ(reporterkarnataka.com): ಎಸ್‌ಯುವಿ ಕಾರೊಂದು ಸುಮಾರು 1 ಸಾವಿರ ಅಡಿ ಆಳದ ಕಣಿವೆಗೆ ಬಿದ್ದು 8 ಯುವಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.ಮೃತರು ಮಹಾರಾಷ್ಟ್ರದ ಸತಾರ ಹಾಗೂ ರತ್ನಗಿರಿ ನಗರದವರು ಎಂದು ತಿಳಿದು ಬಂದಿದೆ.
ಪೋಳಾದಪುರ್-ಮಹಾಬಲೇಶ್ವರ ರಸ್ತೆಯ ಅಂಬೇನಾಳಿ ಘಾಟ್ ಬಳಿ ಈ ದುರಂತ ಭಾನುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ರಾಯಗಢ ಎಸ್‌ಪಿ ತಿಳಿಸಿದ್ದಾರೆ.ಅಂಬೇನಾಳಿ ಘಾಟ್ ಬಳಿ ಕಡಿದಾದ ರಸ್ತೆಯ ತಿರುವಿನಲ್ಲಿ ಕಾರು ಹೋಗುತ್ತಿರುವಾಗ ಆಳವಾದ ಕಣಿವೆಗೆ ನಿಯಂತ್ರಣ ತಪ್ಪಿ ಬಿದ್ದಿದೆ. ಆ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಹ ಸಿಗದಿದ್ದರಿಂದ ತುರ್ತು ಸಹಾಯ ಸಾಧ್ಯವಾಗಿರಲಿಲ್ಲ. ಇದರಿಂದ ಮೃತರ ಕುಟುಂಬದವರು ಆತಂಕಗೊಂಡು ತಮ್ಮವರು ಸಂಪರ್ಕಕಕ್ಕೆ ಸಿಗುತ್ತಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆ ಕೈಗೊಂಡಾಗ ಭೀಕರ ಅಪಘಾತ ಸಂಭವಿಸಿರುವುದು ಕಂಡು ಬಂದಿದೆ.
ಮೃತರನ್ನು ಸತಾರಾ ನಿವಾಸಿಗಳಾದ ರಿತೇಶ್ ಲೋಖಂಡೆ (22), ಸುಹಾಸ್ ಲೋಖಂಡೆ (20), ಉತ್ಕರ್ಷ್ ಶಿಂಗ್ಟೆ (21), ನಿಖಿಲ್ ಶಿಂಗ್ಟೆ (25), ಮಹೇಶ್ ಪವಾರ್ (25), ಆದಿತ್ಯ ಸಾಳುಂಖೆ (21), ರಾಜೇಶ್ ಕಾಟ್ಕರ್ (35), ಮತ್ತು ರತ್ನಗಿರಿಯ ಅಂಶ್ ಚವಾಣ್ (19) ಎಂದು ಗುರುತಿಸಲಾಗಿದೆ.
ಯುವಕರು ಮೋಜಿಗಾಗಿ ರತ್ನಾಗಿರಿಯ ಕಡಲತೀರ ದಾಪೋಲಿಗೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ದಾಪೋಲಿಯಿಂದ ಸತಾರಕ್ಕೆ ಬರುವಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಣಿವೆಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹಾಗೂ ಕಾರನ್ನು ಪೊಲೀಸರು ಎನ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಭಾರಿ ಹರಸಾಹಸಪಟ್ಟು ಮೇಲೆ ತಂದಿದ್ದಾರೆ. ಈ ಕುರಿತ ಅಂಬೇನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಘಟನೆ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು ಇದು ಅತ್ಯಂತ ನೋವಿನ ಸಂಗತಿ, ಮೃತ ಯುವಕರ ಕುಟುಂಬದವರ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು