12:06 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ ತೆರಳುತ್ತಿದ್ದಾಗ ದುರ್ಘಟನೆ

30/04/2026, 21:30

ಹಾಸನ(reporterkarnataka.com): ಹಾಸನ ಜಿಲ್ಲೆಯಲ್ಲಿ ದಾರುಣ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಾರೊಂದು ನಿಯಂತ್ರಣ ತಪ್ಪಿ ನಾಲೆಗೆ ಪಲ್ಟಿಯಾದ ಪರಿಣಾಮ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ-ಹಿರೀಸಾವೆ ಮಾರ್ಗದ ಎನ್‌ಹೆಚ್ 75ರಲ್ಲಿ ನಡೆದಿದೆ.
ಧರ್ಮಸ್ಥಳದಿಂದ ದೇವನಹಳ್ಳಿ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೇಮಾವತಿ ನಾಲೆಗೆ ಉರುಳಿ ಬಿದ್ದಿದೆ. ಕಾರು ಪಲ್ಟಿಯಾದ ಪರಿಣಾಮ ಒಳಗಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಪ್ರಿಯಾಂಕ (20) ಹಾಗೂ ಅವರ ಒಂದೂವರೆ ವರ್ಷದ ಮಗು ವೈಭವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ . ತಾಯಿ ಮತ್ತು ಮಗುವಿನ ಸಾವು ಕುಟುಂಬ ಸದಸ್ಯರು ದುಃಖದ ಕಡಲಲ್ಲಿ ಮುಳುಗುವಂತೆ ಮಾಡಿದೆ.
ಕಾರದಲ್ಲಿ ಪ್ರಯಾಣಿಸುತ್ತಿದ್ದ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

*ಧರ್ಮಸ್ಥಳದಿಂದ ದೇವನೂರಿನತ್ತ ಪ್ರಯಾಣ:*
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಕುಟುಂಬ ಧರ್ಮಸ್ಥಳದಿಂದ ದೇವನಹಳ್ಳಿ ಪ್ರಯಾಣಿಸುತ್ತಿತ್ತು. ವೇಗ ಮತ್ತು ಚಾಲಕನ ನಿಯಂತ್ರಣ ತಪ್ಪಿರುವುದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಈ ದುರ್ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ರಸ್ತೆ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಯೋಚಿಸುಚಂತೆ ಮಾಡಿದೆ. ಚಾಲಕರು ವೇಗ ನಿಯಂತ್ರಣದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ಅತ್ಯಗತ್ಯ ಎಂಬುದನ್ನು ಈ ಘಟನೆ ಸಾರಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು