8:48 AM Saturday6 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಡಿವೈಡರ್‌ಗೆ ಕಾರು ಡಿಕ್ಕಿ: ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

06/12/2025, 08:32

ಧಾರವಾಡ(reporterkarnataka.com): ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರಿನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.

ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ಕೆಲವೇ ಕ್ಷಣದಲ್ಲಿ ಬೆಂಕಿ ಆವರಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಕಾರು ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಭದ್ರಾಪುರ ಬಳಿಯ (ಗದಗ-ಹುಬ್ಬಳ್ಳಿ ಹೆದ್ದಾರಿ) ಅರೆರಾ ಸೇತುವೆ ಸಮೀಪ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿದೆ. ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

ಸಂಜೆ 7.30ರ ಸುಮಾರಿಗೆ ಘಟನೆ ನಡೆದಿದ್ದು, ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ವೇಳೆ ಹಾವೇರಿಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಸಾಲಿಮಠ ಅವರೇ ಡ್ರೈವ್‌ ಮಾಡುತ್ತಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತದೇಹ ಸುಟ್ಟು ಕರಕಲಾಗಿದ್ದರಿಂದ ಪತ್ತೆ ಹಚ್ಚುವುದು ಕಷ್ಟವಾಗಿತ್ತು. ಈ ವೇಳೆ ಅವರ ಕುಟುಂಬ ಪಂಚಾಕ್ಷರಿ ಸಾಲಿಮಠ ಅವರ ಗುರುತು ಪತ್ತೆ ಮಾಡಿದೆ. ಕೈಯಲ್ಲಿದ್ದ ಬ್ರೆಸ್ಲೆಟ್ ನೋಡಿ ಪತ್ತೆ ಮಾಡಲಾಗಿದೆ. ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಾಗ ಏಕಾಎಕಿ ಬೆಂಕಿ‌ ಹತ್ತಿದೆ. ಪೆಟ್ರೋಲ್ ಲಿಕ್ ಆದ ಕಾರಣ ಸ್ಪಾರ್ಕ್ ಆಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್.ಪಿ ಗುಂಜನ್ ಆರ್ಯ ಕೂಡಾ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು