5:15 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಇನ್ಸ್‌ಪೆಕ್ಟರ್ ಸಂದೇಶ್ ಮೇಲಿನ ಮಂಚಕ್ಕೆ ಕರೆದ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ: ಗೃಹ ಸಚಿವ ಡಾ. ಪರಮೇಶ್ವರ್

23/03/2026, 15:52

ಬೆಂಗಳೂರು(reporterkarnataka.com): ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರನ್ನು ಮಂಚಕ್ಕೆ ಕರೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ.
ಸಂತ್ರಸ್ತ ಮಹಿಳೆಯರು ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರೊಂದಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವರು, ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ತಕ್ಷಣವೇ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಆದೇಶಿಸಿದ್ದಾರೆ.

*ಸಿಐಡಿ ತನಿಖೆಗೆ ನೀಡಿದ ಕಾರಣವೇನು?*
ಗೃಹ ಸಚಿವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಸಂತ್ರಸ್ತೆಯರು ತಮಗಾದ ಅನ್ಯಾಯ ಮತ್ತು ಘಟನೆಯ ಪೂರ್ಣ ಮಾಹಿತಿಯನ್ನು ಸಾಕ್ಷಿ ಸಮೇತ ವಿವರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ‘ಮೂಡುಬಿದಿರೆ ಘಟನೆಯ ಕುರಿತು ಇಂದು ಕೆಲವು ಸಂತ್ರಸ್ತೆಯರು ನನ್ನನ್ನು ಭೇಟಿ ಮಾಡಿದರು. ಅವರು ನೀಡಿದ ಮಾಹಿತಿ ಮತ್ತು ಘಟನೆಗಳ ಆಧಾರದ ಮೇಲೆ ಸತ್ಯಾಸತ್ಯತೆ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.
ಈಗಾಗಲೇ ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸಂಬಂಧಪಟ್ಟ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. ‘ತನಿಖೆಯ ವರದಿಯನ್ನು ತುರ್ತಾಗಿ ನೀಡುವಂತೆ ಸೂಚಿಸಿದ್ದೇವೆ. ಈ ಕೃತ್ಯದಲ್ಲಿ ಇನ್ನು ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸಿಐಡಿ ತನಿಖೆಯಿಂದ ಸಂಪೂರ್ಣವಾಗಿ ಹೊರಬರಲಿದೆ’ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

*ಮಹಿಳಾ ಆಯೋಗದ ಮಧ್ಯಸ್ಥಿಕೆ*
ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅವರಿಂದ ಕಿರುಕುಳಕ್ಕೊಳಗಾದ ಸಂತ್ರಸ್ತರೊಂದಿಗೆ ಗೃಹ ಸಚಿವರನ್ನು ಭೇಟಿ ಮಾಡದ ನಂತರ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಧ್ಯಮಗಳೊಂದಿಗೆ ಮಾತನಾಡಿದರು. ‘ಸಂತ್ರಸ್ತೆಯರು ತಮ್ಮ ನೋವು ಮತ್ತು ಘಟನೆಯ ತೀವ್ರತೆಯನ್ನು ನನ್ನ ಮುಂದೆ ತೆರೆದಿಟ್ಟಿದ್ದರು. ಇದನ್ನು ನೇರವಾಗಿ ಗೃಹ ಸಚಿವರ ಗಮನಕ್ಕೆ ತರುವುದೇ ಸೂಕ್ತ ಎಂದು ನನಗೆ ಅನಿಸಿತು. ಅವರಿಗೆ ನ್ಯಾಯ ಸಿಗುವ ಏಕೈಕ ಉದ್ದೇಶದಿಂದ ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ’ ಎಂದರು.
ಗೃಹ ಸಚಿವರು ಸಂತ್ರಸ್ತೆಯರ ಮಾತನ್ನು ತಾಳ್ಮೆಯಿಂದ ಕೇಳಿಸಿಕೊಂಡಿದ್ದಾರೆ. ಪ್ರಕರಣದ ಆಳ ಅರ್ಥವಾದ ನಂತರ ಅವರು ತಕ್ಷಣವೇ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ. ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಸತ್ಯ ಮತ್ತು ಅಸತ್ಯದ ನಡುವಿನ ವ್ಯತ್ಯಾಸ ಶೀಘ್ರವೇ ಬಹಿರಂಗವಾಗಲಿದೆ’ ಎಂದು ಹೇಳಿದರು.

*ಪೊಲೀಸ್ ಇಲಾಖೆ ಮೇಲೆ ನಂಬಿಕೆ*
ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರಿಗೆ ಇರುವ ನಂಬಿಕೆ ಮತ್ತು ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ. ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಮತ್ತು ನ್ಯಾಯ ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಪ್ರಕರಣವು ಈಗ ಸಿಐಡಿ ಕೈ ಸೇರಿರುವುದರಿಂದ, ಮುಂಬರುವ ದಿನಗಳಲ್ಲಿ ತನಿಖೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು