9:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕ್ಯಾಥೊಲಿಕ್‌ ಧರ್ಮಗುರು, ವೈಸಿಎಸ್‌, ವೈಎಸ್ಎಂ ಮಾಜಿ ರಾಷ್ಟ್ರೀಯ ನಿರ್ದೇಶಕ ಫಾ. ವಿನ್ಸೆಂಟ್‌ ಮೊಂತೇರೊ ನಿಧನ

29/08/2025, 20:26

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು, ಯಂಗ್ ಕ್ರಿಶ್ಚಿಯನ್ ಸ್ಟೂಡೆಂಟ್ಸ್‌ (ವೈಸಿಎಸ್‌) ಮತ್ತು ಯಂಗ್ ಸ್ಟೂಡೆಂಟ್ಸ್‌ ಮೂವ್‌ಮೆಂಟ್‌ (ವೈಎಸ್ಎಂ) ಸಂಘಟನೆಗಳ ಮಾಜಿ ರಾಷ್ಟ್ರೀಯ ನಿರ್ದೇಶಕ ಹಾಗೂ ವೈಸಿಎಸ್‌ ಸಂಘಟನೆಯ ಏಶಿಯಾ ವಿಭಾಗದ ಚಾಪ್ಲೈನ್ ಆಗಿ ಸೇವೆ ಸಲ್ಲಿಸಿದ್ದ ವಂದನೀಯ ಫಾ. ವಿನ್ಸೆಂಟ್‌ ಮೊಂತೇರೊ (71) ಅವರು ಮಂಗಳೂರಿನ ಜಪ್ಪು ಸೈಂಟ್ ಜೋಸೆಫ್‌ ವಾಜ್ ಹೋಂ ನಲ್ಲಿ ಆಗಸ್ಟ್ 29ರಂದು ನಿಧನರಾದರು.
ಮೂಲತ: ಮಂಗಳೂರಿನ ಆಂಜೆಲೋರ್ ಚರ್ಚ್ ವ್ಯಾಪ್ತಿಯ ನಿವಾಸಿಯಾಗಿದ್ದ ಅವರು 1981ರಲ್ಲಿ ಧರ್ಮಗುರು ದೀಕ್ಷೆ ಸ್ವೀಕರಿಸಿದ್ದರು. ಬಳಿಕ ನಾಲ್ಕು ದಶಕಗಳ ಕಾಲ ಧರ್ಮಗುರುಗಳಾಗಿ ಸಮರ್ಪಣೆ ಮತ್ತು ಬದ್ಧತೆಯೊಂದಿಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಿನ್ನಿಗೋಳಿ ಸಮೀಪದ ಕಿರೆಮ್‌ ಚರ್ಚ್‌ ನಲ್ಲಿ ಸಹಾಯಕ ಗುರುಗಳಾಗಿ ಮತ್ತು ಬಳಿಕ ಮಂಗಳೂರಿನ ಜಪ್ಪು ಸಂತ ಅಂತೋನಿ ಆಶ್ರಮದ ಸಹಾಯಕ ನಿರ್ದೇಶಕರಾಗಿ ತಮ್ಮ ಸೇವೆಯನ್ನು ಪ್ರಾರಂಭಿಸಿದ್ದರು. ಧಾರ್ಮಿಕ ಸೇವೆಯ ಜತೆಗೆ ಮಂಗಳೂರು ಧರ್ಮ ಪ್ರಾಂತ್ಯದ ಯುವಜನರ ಸಂಘಟನೆಗಳಾದ ಐಸಿಯವೈಎಂ, ವೈಸಿಎಸ್ ಮತ್ತು ವೈಎಸ್‌ಎಂ ನಿರ್ದೇಶಕರಾಗಿ ಹಾಗೂ ಬಳಿಕ ಪ್ರಾದೇಶಿಕ ನಿರ್ದೇಶಕ ಮತ್ತು 1989–1995 ಅವಧಿಯಲ್ಲಿ ರಾಷ್ಟ್ರೀಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಯುವಜನ ಸೇವೆಯಲ್ಲಿನ ಬದ್ಧತೆಯನ್ನು ಗುರಿತಿಸಿ 2004ರಲ್ಲಿ ವೈಸಿಎಸ್‌ನ ಏಷ್ಯಾ ವಿಭಾಗದ ಚಾಪ್ಲೈನ್ ಆಗಿಯೂ ಅವರನ್ನು ನೇಮಕ ಮಾಡಲಾಗಿತ್ತು.
ಧರ್ಮಗುರುಗಳಾಗಿ ಅವರು ಉಡುಪಿ ಜಿಲ್ಲೆಯ ಪಾಂಗಾಳ, ಕಿನ್ನಿಗೋಳಿ ಹಾಗೂ ಅಂತಿಮವಾಗಿ ಮಂಗಳೂರಿನ ಬೆಂದೂರ್ ಚರ್ಚ್ ನಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದರು. ಕ್ಯಾಥೊಲಿಕ್ ಸಭಾ ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ನಿವೃತ್ತ ಜೀವನವನ್ನು ಜಪ್ಪು ಸಂತ ಜುಜೆ ವಾಜ್ ಹೋಂನಲ್ಲಿ ಕಳೆಯುತ್ತಿದ್ದರು. ಯುವಕರಿಗೆ ಮತ್ತು ಧರ್ಮಗುರುಗಳಿಗೆ ಮಾರ್ಗದರ್ಶನ ನೀಡಿದ ದಾರ್ಶನಿಕ ನಾಯಕ ಎಂಬುದಾಗಿ ಅವರನ್ನು ಸ್ಮರಿಸಲಾಗುತ್ತಿದೆ.
ಅವರ ಅಂತ್ಯಕ್ರಿಯೆಯ ಬಲಿಪೂಜೆ ಮತ್ತು ಅಂತ್ಯ ವಿಧಿಗಳು ಆಗಸ್ಟ್ 31ರಂದು ಭಾನುವಾರ ಸಂಜೆ 4 ಗಂಟೆಗೆ ವೆಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ನಡೆಯಲಿವೆ.
ಕ್ಯಾಥೊಲಿಕ್ ಸಭಾ ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ವಂದನೀಯ ಫಾ. ವಿನ್ಸೆಂಟ್‌ ಮೊಂತೇರೊ ಅವರ ನಿಧನಕ್ಕೆ ಕ್ಯಾಥೊಲಿಕ್ ಕೇಂದ್ರೀಯ ಸಮಿತಿಯ ಅಧ್ಯಕ್ಷ ಸಂತೋಷ್‌ ಡಿ’ಸೋಜಾ ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು