ಇತ್ತೀಚಿನ ಸುದ್ದಿ
ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಕೂಡ ರದ್ದು?: ಶೀಘ್ರದಲ್ಲೇ ಹೊರ ಬೀಳಲಿದೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಆದೇಶ
23/05/2021, 15:22
ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಅರ್ಭಟದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡುವ ಕುರಿತು ಚಿಂತನೆ ಆರಂಭವಾಗಿದೆ.
ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ನಡೆಸಬೇಕೆ ? ಅಥವಾ ಬೇಡವೇ? ಅನ್ನೋ ಕುರಿತು ಮಹತ್ವದ ಸಭೆ ನಡೆಯಲಿದೆ
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿವಾಲ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಕೂಡ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ವಿಪರೀತವಾಗಿದ್ದು, ಲಾಕ್ ಡೌನ್ ಜಾರಿಯಲ್ಲಿದೆ. ಕೊರೊನಾ ಸೋಂಕಿನ ಜೊತೆಗೆ ಬ್ಲ್ಯಾಕ್ ಹಾಗೂ ವೈಟ್ ಫಂಗಸ್ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ ಮಹತ್ವದ ಆದೇಶ ಹೊರ ಬೀಳುವ ಸಾಧ್ಯತೆ ಇದೆ.