7:27 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ

21/09/2023, 00:09

ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ
ಆರೋಪಿಯು 2004ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಯು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಬಂಧಿಸಿ
ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯ ದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು