3:00 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಸಹಿತ 1.47 ಲಕ್ಷ ರೂ. ಮೌಲ್ಯದ ಸೊತ್ತು ವಶ; ಇಬ್ಬರ ಬಂಧನ

30/07/2023, 13:09

ಮಂಗಳೂರು(reporterkarnataka.com): ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡಿರುವ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ಬಜಪೆ ಸಮೀಪ ಬಂಧಿಸಿದ್ದಾರೆ.
ಬಾಳೆಪುಣಿ ಹೊಸಹಿತ್ತಿಲು ನಿವಾಸಿ ಅಬ್ಬಾಸ್(61) ಹಾಗೂ ಮೂಲತ ಮಂಜೇಶ್ವ ಪೈವಳಿಕೆ ನಿವಾಸಿ, ಪ್ರಸ್ತುತ ಕುತ್ತಾರಿನಲ್ಲಿರುವ ಯಶವಂತ ಕುಮಾರ್ (45) ಬಂಧಿತ ಆರೋಪಿಗಳು. ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮೊಬೈಲ್ ಫೋನು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐ ಯವರಾದ ರಾಜೇಂದ್ರ ಬಿ., ಸುದೀಪ್ ಎಂ. ವಿ., ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು