4:31 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: 1.25 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶ; ಕುಲಶೇಖರದ ನಿವಾಸಿಯ ಸೆರೆ

23/07/2023, 22:50

ಮಂಗಳೂರು(reporterkarnataka.com): ಮಾದಕ ದ್ರವ್ಯ (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಪಡೀಲ್ ಬಳಿ ಒಬ್ಬನನ್ನು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತುವಾದ ಎಂಡಿಎಂಎ
ಖರೀದಿಸಿಕೊಂಡು ಮಂಗಳೂರು ನಗರದ ಪಡೀಲ್ ಕೆಂಬಾರ್ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಹೊಂದಿದ ಆರೋಪದ ಮೇಲೆ
ಕುಲಶೇಖರದ ಹರ್ಷಿತ್ ಶೆಟ್ಟಿ(29) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 25 ಗ್ರಾಂ ತೂಕದ 1.25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,35,500 ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದರೋಡೆ ಮತ್ತು ಹಲ್ಲೆ ಪ್ರಕರಣ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿನ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಗಾಂಜಾ ಸೇವನೆ ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ ಅಪಹರಣ ಮತ್ತು ಸರಕಳ್ಳತನ ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು