12:10 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ 17 ಪ್ರಕರಣಗಳ ಕುಖ್ಯಾತ ಆರೋಪಿ ಸೆರೆ; 2.50 ಲಕ್ಷ ಮೌಲ್ಯದ ಎಂಡಿಎಂಎ ವಶ

19/08/2023, 20:29

ಮಂಗಳೂರು(reporterkarnataka.com): ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ 2.50 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ವಿಟ್ಲ ಪಡ್ನೂರು ಕೊಡಂಗಾಯಿ ಹೌಸ್ ನಿವಾಸಿಯಾದ ಹಸನ್ ಸಾಧಿಕ್ ಅಲಿಯಾಸ್ ಬ್ಲೇಡ್ ಸಾಧಿಕ್(35) ಬಂಧಿತ ಆರೋಪಿ. ಈತ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಈತನಿಂದ ಒಟ್ಟು 50 ಗ್ರಾಂ ತೂಕದ ರೂ. 2,50,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ 800 ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 3,65,500/- ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿ ಹಸನ್ ಸಾದಿಕ್ ಅಲಿಯಾಸ್ ಬ್ಲೇಡ್ ಸಾದಿಕ್ ಎಂಬಾತನ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 8 ಹಲ್ಲೆ, ಬೆದರಿಕೆ ಪ್ರಕರಣಗಳು, 4 ಕೊಲೆ ಯತ್ನ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ, ಉಪ್ಪಿನಂಗಡಿ ಠಾಣೆಯಲ್ಲಿ ಮಾನಭಂಗ ಹಾಗೂ ಕಿಡ್ನಾಫ್ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಬೆಂಗಳೂರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹೀಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 6 ತಿಂಗಳಿನಿಂದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುಧ್ದ ನ್ಯಾಯಾಲಯವು ವಾರಂಟ್ ಇದೆ.
ಆರೋಪಿ ಮತ್ತು ಮಾದಕ ವಸ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು