7:41 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ; 91 ಸಾವಿರ ರೂ. ಮೌಲ್ಯದ ಸೊತ್ತು ವಶ

24/02/2024, 00:28

ಮಂಗಳೂರು(reporterkarnataka.com): ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡುಶೆಡ್ಡೆ ಶಿವನಗರದ ನಿವಾಸಿಯಾದ ಮೊಹಮ್ಮದ್ ರಿಜ್ವಾನ್ (34) ಬಂಧಿತ ಆರೋಪಿ. ಈತ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿತನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿಯಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 91,280/- ರೂ. ಎಂದು ಅಂದಾಜಿಸಲಾಗಿದೆ.
ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು