6:46 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯ ಸೆರೆ

01/08/2026, 10:37

ಮಂಗಳೂರು(reporterkarnataka.com): ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2015ನೇ ಇಸವಿಯಲ್ಲಿ ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನೇರ ಭಾಗಿಯಾಗಿ ದಸ್ತಗಿರಿಯಾಗದೇ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಶಿಕಾರಿಪುರದ
ಕರ್ನೇಳ್ಳಿ ಗ್ರಾಮದ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (34) ಎಂದು ಗುರುತಿಸಲಾಗಿದೆ.
ಈತನು 2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬುವರ ನಡುವೆ ಮಾತಿನ ಚಕಮಕಿ ನಡೆದ ವಿಚಾರದಲ್ಲಿ ಪ್ರಮುಖ ಆರೋಪಿಯಾದ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷನು ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ ಅಲಿಯಾಸ್ ನರೇಶ್ ಮತ್ತು ಜಗ್ಗು ರವರ ಜೊತೆ ಸೇರಿಕೊಂಡು ಅಶೋಕ ಕುಮಾರ ಕೊಟ್ಟಾರಿ ರವರಿಗೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಗಂಭೀರ ಗಾಯವುಂಟು ಮಾಡಿ ಕೊಲೆಯತ್ನ ನಡೆಸಿದ್ದು, ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಚುಂಕಿ ಆಕಾಶಭವನ ಎಂಬಾತನು ಪ್ರಕರಣ ದಾಖಲಾದ ದಿನದಿಂದ ದಸ್ತಗಿರಿಗೆ ಸಿಗದೇ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ವಿರುದ್ಧ 25/2025 ರಂತೆ ಎಲ್ಪಿಸಿ (LPC) ವಾರಂಟ್ ಹೊರಡಿಸಿತ್ತು.
ಯಾವುದೇ ಸುಳಿವು ಇಲ್ಲದ ಈತನ ಬಗ್ಗೆ ಬಹಳ ಸಮಯದಿಂದ ಮಾಹಿತಿ ಸಂಗ್ರಹಿಸುತ್ತಿದ್ದ ಸಿಸಿಬಿ ಪೊಲೀಸರಿಗೆ ಈತನು ಶಿವಮೊಗ್ಗದಲ್ಲಿ ಇದ್ದಾನೆಂದು ಖಚಿತ ಮಾಹಿತಿ ಸಂಗ್ರಹಿಸಿಕೊಂಡು ದಿನಾಂಕ 29-07-2026 ರಂದು ಈತನನ್ನು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು