6:44 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರ ಸೆರೆ; 1 ಕೆಜಿ ಚಿನ್ನಾಭರಣ ವಶ

15/06/2023, 17:11

ಮಂಗಳೂರು(reporterkarnataka.com):ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ:
ಜನವರಿ 15ರಂದು ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.
ಈ ಕ್ಷಿಷ್ಟಕರವಾದ ಹಾಗೂ ಯಾವುದೇ ಸುಳಿವು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿ ಈ ಪ್ರಕರಣದಲ್ಲಿ ಭಾಗಿಯಾದ
ಗಣೇಶ ನಾಯ್ಕ್(26), ರಂಜಿತ್ ಕೆ.ಆರ್(26) ಎಂಬವರನ್ನು ದಸ್ತಗಿರಿ ಮಾಡಿ ಅವರ ವಶದಿಂದ ಕಳವುಗೈದ ಸೊತ್ತುಗಳ ಪೈಕಿ ಒಟ್ಟು 1 ಕೆಜಿ ವಿವಿಧ ನಮೂನೆಯ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ. 55 ಲಕ್ಷ ಆಗಬಹುದು. ಅಲ್ಲದೇ ಆರೋಪಿಗಳ ವಶದಿಂದ 2 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 56,50,000/-ಆಗಬಹುದು. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಈ ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯೊಂದರ ಬಾಗಿಲಿನ ಬೀಗವನ್ನು ಒಡೆದು ಮನೆಯಲ್ಲಿನ ಬೆಲೆಬಾಳುವ ಸೊತ್ತುಗಳನ್ನು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವುಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣವು ಕೂಡಾ ಪತ್ತೆಯಾಗಿರುತ್ತದೆ.
ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ. ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ,ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐಯವರಾದ ಶಶಿಧರ ಶೆಟ್ಟಿ, ಹರೀಶ್,ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು