6:26 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ: 2.50 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ

08/08/2023, 21:06

ಮಂಗಳೂರು(reporterkarnataka.com): ಮಾದಕ ವಸ್ತುವಾದ ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಸುಮಾರು 2.50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ‌.
ಬಂಧಿತ ಆರೋಪಿ ಉಪ್ಪಳದ ನಿವಾಸಿ ಮೊಹಮ್ಮದ್ ರಫೀಕ್ ಬಿ.(40) ಎಂದು ಗುರುತಿಸಲಾಗಿದೆ.
ಆರೋಪಿಯು ತಲಪಾಡಿ ಗ್ರಾಮದ ಕೆ. ಸಿ. ರೋಡ್ ಪರಿಸರದಲ್ಲಿ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಯಿಂದ 2,50,000 ರೂ. ಮೌಲ್ಯದ 50 ಗ್ರಾಂ ಎಂಡಿಎಂಎ ಮಾದಕ ವಸ್ತು, 8,000 ರೂ. ನಗದು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,68,500/-ರೂ ಎಂದು ಅಂದಾಜಿಸಲಾಗಿದೆ.
ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಸಿಸಿಬಿ ಕಾರ್ಯಾಚರಣೆಯಲ್ಲಿ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ. ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಾದಕ ವಸ್ತು ಮಾರಾಟ ಮಾಡುವವರ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು