3:13 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85 ಲಕ್ಷ ರೂ. ಮೌಲ್ಯದ ಸೊತ್ತು ವಶ

15/05/2024, 21:52

ಮಂಗಳೂರು(reporterkarnataka.com): ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪೊಲೀಸರ ಬಂಧಿಸಿದ್ದಾರೆ. ಬಂಧಿತರಿಂದ 270 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ದೇರಳಕಟ್ಟೆಯ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಆರೋಪಿಗಳಾದ ಬಿಜೈ ನ್ಯೂರೋಡಿನ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ಗ್ರಾಮದ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ಸಮೀಪದ ಮೊಹಮ್ಮದ್ ನೌಮಾನ್(22) ಹಾಗೂ ಬೋಳಿಯಾರ್ ಸಮೀಪದ ಮೊಹಮ್ಮದ್ ಸಫೀಲ್(23) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ,4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ 2021ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.


ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು