7:20 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲವೇ ಚೈತ್ರಾ ಕುಂದಾಪುರ?: ಏನು ಕೇಳಿದ್ರೂ ಸ್ವಾಮೀಜಿಯ ಕೇಳಿ ಎನ್ನುತ್ತಿದ್ದಾಳಂತೆ ಆಕೆ!

15/09/2023, 15:56

ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರು ಸಿಸಿಬಿ ಪೊಲೀಸರ ಮುಂದೆ ಯಾವುದೇ ಹೇಳಿಕೆ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ.
ನ್ಯಾಯಾಲಯ ಚೈತ್ರಾ ಕುಂದಾಪುರಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೂ ಆಕೆ ಪೊಲೀಸರ ಮುಂದೆ ಬಾಯಿ ಬಿಚ್ಚುತ್ತಿಲ್ಲ. ಸಿಸಿಬಿ ಪೊಲೀಸರು ತೀವ್ರ ತನಿಖೆಗೆ ಒಳಪಡಿಸಿದರೂ ಆಕೆ ಯಾವುದೇ ಉತ್ತರ ನೀಡುತ್ತಿಲ್ಲ. ಯಾವುದೇ ಪ್ರಶ್ನೆ ಕೇಳಿದರೂ ಸ್ವಾಮೀಜಿಯನ್ನು ಕೇಳಿ ಎಲ್ಲಾ ಗೊತ್ತಾಗುತ್ತದೆ ಎಂದು ಚೈತ್ರಾ ಉತ್ತರಿಸುತ್ತಿದ್ದಾಳಂತೆ. ಅದ್ದರಿಂದ ಯಾವುದೇ ಹೇಳಿಕೆ ದಾಖಲಿಸಿಕೊಳ್ಳಲು ಇದುವರೆಗೆ ಪೊಲೀಸರಿಗೆ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮಧ್ಯೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನಾಳೆ ವಿಚಾರಣೆಗೆ ಬರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು