7:18 AM Tuesday9 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16 ಲಕ್ಷ ರೂ. ಮೌಲ್ಯದ ಸೊತ್ತು ವಶ

01/05/2024, 21:55

ಮಂಗಳೂರು(reporterkarnataka.com): ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದು, ಬಂಧಿತರಿಂದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ಬಸ್ತಿಪಡ್ಪು ದರ್ಗಾ ರೋಡ್ ನಿವಾಸಿ
ಮೊಹಮ್ಮದ್ ಇಶಾನ್ (35) ಹಾಗೂ ಉಳ್ಳಾಲ ಟಿ.ಸಿ. ರೋಡ್ ಅಕ್ಕರೆಕೆರೆ ನಿವಾಸಿ ಜಾಫರ್ ಸಾಧಿಕ್ (35 ) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿತರಿಂದ 9,00,000/- ರೂ ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ16,13,800/- ರೂ. ಎಂದು ಅಂದಾಜಿಸಲಾಗಿದೆ. ಆರೋಪಿತರಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ.


ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು