7:39 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16 ಲಕ್ಷ ರೂ. ಮೌಲ್ಯದ ಸೊತ್ತು ವಶ

01/05/2024, 21:55

ಮಂಗಳೂರು(reporterkarnataka.com): ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದು, ಬಂಧಿತರಿಂದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ಬಸ್ತಿಪಡ್ಪು ದರ್ಗಾ ರೋಡ್ ನಿವಾಸಿ
ಮೊಹಮ್ಮದ್ ಇಶಾನ್ (35) ಹಾಗೂ ಉಳ್ಳಾಲ ಟಿ.ಸಿ. ರೋಡ್ ಅಕ್ಕರೆಕೆರೆ ನಿವಾಸಿ ಜಾಫರ್ ಸಾಧಿಕ್ (35 ) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿತರಿಂದ 9,00,000/- ರೂ ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ16,13,800/- ರೂ. ಎಂದು ಅಂದಾಜಿಸಲಾಗಿದೆ. ಆರೋಪಿತರಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ.


ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು