6:40 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆ: ಗುರುವಂದನಾ ಕಾರ್ಯಕ್ರಮ

01/09/2026, 16:32

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಹಾಗೂ ಪಚ್ಚನಾಡಿ ದೇವಿನಗರದ ಮಾತೃಶ್ರೀ ಸತ್ಸಂಗ ಭಜನಾ ಮಂಡಳಿಯ ಸದಸ್ಯರು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀ ಮನೋಜ್ ಶಾಂತಿ ಅವರು ಗುರುಪೂಜೆ ನಡೆಸಿದರು.

ಗುರುವಂದನಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರು ಹಾಗೂ ಗುರು ಶ್ರೇಷ್ಠರಾದ ಶ್ರೀ ಮಾಧವ ಸುವರ್ಣ ಯು. ಅವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗೌರವಧ್ಯಕ್ಷರಾದ ಶ್ರೀ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು