5:27 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್ ಜಿ ಯೋಜನೆ ಜಾರಿ: ಹರ್ಷವರ್ಧನ್

30/01/2026, 17:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2047ರ ವಿಕಸಿತ ಭಾರತದ ಪರಿಕಲ್ಪನೆ ದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್ ಜಿ ಎಂಬ ಮಹತ್ವಾಕಾಂಕ್ಷೆ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಮಾಜಿ ಶಾಸಕ ಬಿ ಹರ್ಷವರ್ಧನ್ ಹೇಳಿದರು.
ನಂಜನಗೂಡು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಹಿಂದಿನ ಮನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಶೇಕಡ 90ರಷ್ಟು ಅನುದಾನ ಪಡೆದು ವ್ಯಾಪಕ ಭ್ರಷ್ಟಾಚಾರ ಹಾಗೂ ಅಕ್ರಮ ನಡೆಸಲಾಗುತ್ತಿತ್ತು. ಕಾರ್ಮಿಕರ ನಕಲಿ ಖಾತೆಗಳನ್ನು ತೆರೆದು ಗುತ್ತಿಗೆದಾರದಿಂದ ಹಣ ಲೂಟಿ ಮಾಡಲಾಗುತ್ತಿತ್ತು. ಇದೆಲ್ಲವನ್ನು ಮನಗಂಡ ಕೇಂದ್ರ ಸರ್ಕಾರ ಕೆಲವು ಮಹತ್ವ ಪೂರ್ಣ ಯೋಜನೆಗಳೊಂದಿಗೆ ಇದನ್ನು ಅನುಷ್ಠಾನಗೊಳಿಸಲಾಗಿದೆ.
ಅಲ್ಲದೆ ನೂರು ದಿನಕ್ಕೆ ಬದಲಾಗಿ 125 ದಿನ ಉದ್ಯೋಗ ನೀಡಲು ಮುಂದಾಗಿದೆ 14 ವರ್ಷದಲ್ಲಿ ಕೇಂದ್ರ ಸರ್ಕಾರದ ಯಾವುದೇ ಭ್ರಷ್ಟಾಚಾರ ಆರೋಪ ಮಾಡಲು ಸಾಧ್ಯವಾಗದ ಕಾಂಗ್ರೆಸ್ ಇದನ್ನು ಟೀಕೆ ಮಾಡುವ ಮೂಲಕ ರಾಜಕೀಯ ಪ್ರೇರಿತ ಆಪಾದನೆಯಲ್ಲಿ ತೊಡಗಿದೆ ಎಂದು ಕಿಡಿ ಕಾರಿದರು.
ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಸುಣ್ಣ ಬಣ್ಣ ಹೊಡೆಯಲು ಸಿದ್ದರಾಮಯ್ಯನವರ ಸರ್ಕಾರದಲ್ಲಿ ದುಡ್ಡಿಲ್ಲ. ಆದರೆ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರಿಡುತ್ತಾರಂತೆ. ಇಡಲಿ ಇದರ ಬಗ್ಗೆ ನಮ್ಮ ತಕರಾರಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಬಿಜೆಪಿಯಲ್ಲಿ ಗುಂಪುಗಾರಿಕೆ ಹಾಗೂ ಬಣಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಮ್ಮಲ್ಲಿ ಅಂತಹ ಯಾವುದೇ ಬಣಗಳಿಲ್ಲ ಬಿಜೆಪಿ ಒಂದೇ ಬಣ ಎಂದು ತಿಳಿಸುತ್ತಾ ಕಾಂಗ್ರೆಸ್ನಲ್ಲೂ ಕೂಡ ಶಾಸಕರ ಬಣ, ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸಂಸದರ ಬಣಗಳಿಲ್ಲವೇ ಎಂದು ಮಾರ್ಮಿಕವಾಗಿ ನುಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ನ ಉಪಾಧ್ಯಕ್ಷರಾದ ಸದಾನಂದ ಮಾತನಾಡಿ ರಾಜ್ಯಸಭೆ ಹಾಗೂ ಲೋಕಸಭೆಗಳಲ್ಲಿ ವಿಸ್ತೃತವಾಗಿ ಚರ್ಚಿಸಿ ರಾಷ್ಟ್ರಪತಿಗಳಿಂದ ಅಂಕಿತ ಪಡೆದು ಜಾರಿಯಾದ ಈ ಯೋಜನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಕೇಂದ್ರದಿಂದ ಶೇಕಡ 90ರಷ್ಟು ಅನುದಾನ ಪಡೆದು ಮನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಲಾಗುತ್ತಿತ್ತು ಆದರೆ ಈಗ ಬಯೋಮೆಟ್ರಿಕ್ ಜಾರಿಗೆ ತಂದಿರುವುದಲ್ಲದೆ ರಾಜ್ಯ ಸರ್ಕಾರ 40% ಅನುದಾನ ನೀಡಬೇಕಾಗಿರುವುದರಿಂದ ಹಣ ನೀಡಲು ಹಾಗು ಹಣ ಒಡೆಯಲು ಆಗದೆ ಈ ರೀತಿ ವಿರೋಧ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


ಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಂಜನಗೂಡು ಉಸ್ತುವಾರಿ ಕೋಟೆ ವೆಂಕಟಸ್ವಾಮಿ, ಗ್ರಾಮಾಂತರ ಕಾರ್ಯದರ್ಶಿ ವಿನಯ್, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ಮುಖಂಡರುಗಳಾದ ಹೊನ್ನಗೆರೆ ಪುಟ್ಟಸ್ವಾಮಿ,ಎಮ್ಮರಗಾಲ ಶಿವಣ್ಣ, ರಾಘವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು