9:50 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಖರ್ಗೆ, ರಾಹುಲ್ ಹೋರಾಟಕ್ಕೆ ಸಿಕ್ಕ ಮಾನ್ಯತೆ: ಮುಖ್ಯಮಂತ್ರಿ

01/05/2025, 20:03

ಹುಬ್ಬಳ್ಳಿ(reporterkarnataka.com): ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ನಡೆದ ಜನತಾ ಸಮಾವೇಶದಲ್ಲಿ ಮಾತನಾಡಿದರು.
ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.
ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ ಮೋದಿಯವರೇ ನೀವು ಯಾವುದನ್ನು ತಾನೆ ಬಿಟ್ಟಿದ್ದೀರಿ ಎಂದರು.
ಡಾಲರ್ ಬೆಲೆ 2014ರಲ್ಲಿ 59 ರೂಪಾಯಿ ಇತ್ತು. ಇವತ್ತು 86 ರೂಪಾಯಿ ಆಗಿದೆ. ಇದಕ್ಕೆ ಯಾರು ಕಾರಣರು ಮೋದಿಯವರೇ ? ಇದೇನಾ ನಿಮ್ಮ ಅಚ್ಛೆ ದಿನ್ ಎಂದು ವ್ಯಂಗ್ಯವಾಡಿದರು.
50 ಕೆಜಿ ಸಿಮೆಂಟ್ ಬೆಲೆ 2014 ರಲ್ಲಿ 200 ಇದ್ದದ್ದು ಈಗ 450 ರೂ ಆಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 425 ಇದ್ದದ್ದು ಇಂದು 850 ದಾಟಿದೆ. ಶೇ.100 ರಷ್ಟು ಬೆಲೆ ಏರಿಕೆ ಮಾಡಿದ್ದೀರಿ. ಜನದ್ರೋಹದ ಪರಮಾವಧಿ ಮುಂದುವರೆಸಿ ಸಿಲಿಂಡರ್ ಸಬ್ಸಿಡಿ ತೆಗೆದು ಹಾಕಿ ಬಡವರ ಮತ್ತು ಮಧ್ಯಮ ವರ್ಗದವರ ವಿರೋಧಿ ಆಗಿರುವ ಮೋದಿಯವರೇ ನಿಮ್ಮ ವಂಚನೆಗೆ ಕೊನೆಯೇ ಇಲ್ಲವೇ ಎಂದು ಪ್ರಶ್ನಿಸಿದರು.
ಪ್ರಹ್ಲಾದ್ ಜೋಶಿಯವರೇ ನೀವು ಮತ್ತು ಮೋದಿಯವರು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದ್ದೀರಿ. ಆದರೆ, ನಿಮ್ಮ ಚಾಳಿಯನ್ನು ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದೀರಿ.‌ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.


ರಾಜ್ಯ ಸರ್ಕಾರ ಹಾಲಿನ ದರ 4ರೂ ಹೆಚ್ಚಿಸಿ ಇಷ್ಟೂ ಹಣವನ್ನೂ ರೈತರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಹತ್ತು ಪೈಸೆ ಕೂಡ ಸರ್ಕಾರಕ್ಕೆ ಬರುವುದಿಲ್ಲ. ಆದರೆ, ನೀವು ಹೆಚ್ಚಿಸಿದ ಬೆಲೆ ಏರಿಕೆ ಯಾವ ಭಾರತೀಯರಿಗೆ ಸಿಗುತ್ತಿದೆ ಹೇಳಿ ಎಂದರು.
ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅಸಮಾನತೆ, ತಾರತಮ್ಯ ಹೋಗಿಲ್ಲ. ಆದ್ದರಿಂದ ನಾವು ನಮ್ಮ ಪ್ರಣಾಳಿಕೆಯಲ್ಲಿ ಆರ್ಥಿಕ, ಸಾಮಾಜಿಕ, ಜಾತಿ ಗಣತೆ ಬಗ್ಗೆ ಭರವಸೆ ಕೊಟ್ಟಿದ್ದೆವು. ನಾವು ಮಾಡಿದ ಘೋಷಣೆಯಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಮತ್ತು ರಾಹುಲ್ ಗಾಂಧಿಯವರು ಪಾರ್ಲಿಮೆಂಟಿನಲ್ಲಿ ನಿರಂತರ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಈಗ ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದಿದೆ. ಇದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ಸೈದ್ಧಾಂತಿಕ ಬದ್ಧತೆಗೆ ಸಿಕ್ಕ ಗೆಲುವು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು