12:06 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ

09/07/2024, 20:50

ಅನುಷ್ ಪಂಡಿತ್, ಮಂಗಳೂರು

Info.reporterkarnataka@gmail.com

ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್ ಸುಲಿಗೆ ಮಾಡಿದ ಪ್ರಕರಣ ಸಂಬಂಧಿಸಿದ್ದಂತೆ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಚಡ್ಡಿ ಗ್ಯಾಂಗ್ ನ 4 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಮಧ್ಯಪ್ರದೇಶ ರಾಜ್ಯದವರಾಗಿದ್ದು, ರಾಜು ಸಿಂಗ್ವಾನಿಯ (24), ಮಯೂರ್ (30 ), ಬಾಲಿ (22 ) ಹಾಗೂ ವಿಕ್ಕಿ (21) ಎಂದು ಗುರುತಿಸಲಾಗಿದೆ.


ಅರೋಪಿಗಳು ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿದ್ದರು. ನಂತರ ವಿಕ್ಟರ್ ಮೆಂಡೋನ್ಸಾ ಅವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೋನ್ಸ ಅವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, 3 ಸಾವಿರ ರೂ. ನಗದು ಹಣವನ್ನು ಸುಲಿಗೆ ಮಾಡಿ ಮನೆಯ ವೆರಾಂಡದಲ್ಲಿದ್ದ ಕಾರಿನಲ್ಲಿ ಪರಾರಿಯಾಗಿದ್ದರು.
ಈ ಬಗ್ಗೆ ಪ್ಯಾಟ್ರ್ರಿಸಿಯಾ ಮೆಂಡೊನ್ಸಾ ಅವರು ನೀಡಿದ ದೂರಿನಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದರು. ಬಳಿಕ ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಗುಮಾನಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.
ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಯಿತು. ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ನೀಡಿದರು. 4 ಮಂದಿ ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು, ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಯಿತು. ನಂತರ ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದರು. ಬಂಧಿತರ
ವಿಚಾರಣೆ ನಡೆಸಿದಾಗ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ವಶಪಡಿಸಲಾಗಿದೆ.
ಕೇವಲ 5 ತಾಸಿನೊಳಗೆ ಈ ಕಾರ್ಯಾಚರಣೆಯನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಬಿ.ಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಭಾರತೀ ಜಿ. ಅವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ಅವರು ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು