1:35 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ: ಗುರುಪುರ ಮಠದ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರ ನೋಟಿಸ್

11/10/2023, 10:54

ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಹುಕೋಟಿ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರಿಗೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಅವರು ರಾಜಶೇಖರಾನಂದ ಸ್ವಾಮೀಜಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. 48 ತಾಸಿನೊಳಗೆ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
ವಂಚನೆ ಪ್ರಕರಣ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಒಡನಾಡಿಗಳು ಪೊಲೀಸ್ ಬಲೆಗೆ ಬಿದ್ದ ನಂತರ ಚೈತ್ರಾ ಕುಂದಾಪುರ ಆದಾಯ ತೆರಿಗೆ ಇಲಾಖೆಗೆ ಬರೆದದ್ದು ಎನ್ನಲಾದ ಪತ್ರವೊಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತಾಡುತ್ತಿತ್ತು. ಅದರಲ್ಲಿ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಕುರಿತು ಉಲ್ಲೇಖಿಸಲಾಗಿತ್ತು. ಈ ಕುರಿತು ವಜ್ರದೇಹಿ ಮಠದ ಸ್ವಾಮೀಜಿ ಸ್ಪಷ್ಠೀಕರಣ ಕೂಡ ನೀಡಿದ್ದರು. ಆದರೆ ಪ್ರಕರಣದ ಸತ್ಯಾಸತ್ಯತೆ ಶೋಧಕ್ಕಾಗಿ ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ಗುರುಪುರ ಮಠದ ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಪ್ರಸ್ತುತ ಬೆಂಗಳೂರಿನ‌ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು