12:58 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ; 800 ಪುಟಗಳ ದೋಷಾರೋಪ ಪಟ್ಟಿ; 68 ಸಾಕ್ಷ್ಯ ಸಂಗ್ರಹ

09/11/2023, 19:47

ಬೆಂಗಳೂರು(reporterkarnataka.com):ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಮತ್ತು ತಂಡದ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರು ಬುಧವಾರ ನಗರದ 3ನೇ ಎಸಿಎಂಎಂ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಸುಮಾರು 68 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿರುವ ಚಾರ್ಜ್​ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಕೊಟ್ಯಂತರ ರೂ. ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಸಿಸಿಬಿ ಘಟಕದ ಮಹಿಳಾ ಸಂರಕ್ಷಣಾ ದಳದ ಎಸಿಪಿ ನೇತೃತ್ವದಲ್ಲಿ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಚೈತ್ರಾ ಹಾಗೂ ಉಳಿದ ಆರೋಪಿಗಳು ವಂಚನೆ ಪ್ರಕರಣದಲ್ಲಿ ತಮ್ಮ ಪಾತ್ರಗಳ ಬಗ್ಗೆ ತನಿಖಾಧಿಕಾರಿ ಎದುರು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ತಪ್ಪೊಪ್ಪಿಗೆಯನ್ನು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪಿಗಳು ಉದ್ಯಮಿಯಿಂದ ಎಲ್ಲೆಲ್ಲಿ ಹಣ ಪಡೆದಿದ್ದರು. ಏನೆಲ್ಲ ಖರೀದಿಸಿದ್ದರು. ಎಲ್ಲೆಲ್ಲಿ ಹೂಡಿಕೆ ಮಾಡಿದ್ದರು ಎಂಬುದರ ಬಗ್ಗೆ ಸೂಕ್ತ ಪುರಾವೆಗಳನ್ನು ಸಲ್ಲಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು