ಇತ್ತೀಚಿನ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು: ಇಬ್ಬರಿಗೆ ಗಾಯ; ಆಸ್ಪತ್ರೆಗೆ ದಾಖಲು
07/07/2023, 08:12

ಮಂಗಳೂರು(reporterkarnataka.com): ನಗರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಾರು ಕುಂಟಿಕಾನ ಕಡೆಯಿಂದ ಕೆಪಿಟಿ ಕಡೆಗೆ ಆಗಮಿಸುತ್ತಿತ್ತು. ಗಾಯಾಳುಗಳನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.