ಇತ್ತೀಚಿನ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿ 2 ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾವೇರಿ ಬಸ್: ಕೆಲವರಿಗೆ ಸಣ್ಣ ಪುಟ್ಟ ಗಾಯ
29/10/2023, 16:21
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆಯ ಬಿಳಗುಳ ಸಮೀಪ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂ ಆಗಿದೆ.
ಬೆಂಗಳೂರಿನಿಂದ ಕೊಟ್ಟಿಗೆಹಾರ ಕ್ಕೆ ಪ್ರತಿ ನಿತ್ಯ ಬರುತ್ತಿದ್ದ ಕಾವೇರಿ ಬಸ್ ಬೆಳೆಗ್ಗಿನ ಜಾವ ಡಿಕ್ಕಿ ಆಗಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡ ಮೂಡಿಗೆರೆ ಮತ್ತು 112 ಸ್ಥಳಕ್ಕೆ ಧಾವಿಸಿ ಸ್ಪಂದಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.