10:05 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್. ಚಲುವರಾಯಸ್ವಾಮಿ

26/11/2025, 10:04

ಮಂಡ್ಯ(reporterkarnataka.com): ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಹೇಳಿದರು.
ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಅಭಿಪ್ರಾಯ ಇದೆ. ಆದರೆ ಇದು ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳಿದರು.
ಶಾಸಕರ ಖರೀದಿ ವಿಚಾರವಾಗಿ ಛಲವಾದಿ ನಾರಾಯಣ್ ಸ್ವಾಮಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ 50 ವರ್ಷ ಆಡಳಿತ ಮಾಡಿದಾಗ ಭ್ರಷ್ಟಾಚಾರ ಇರಲಿಲ್ಲ. ಭ್ರಷ್ಟಾಚಾರ ಶುರುವಾಗಿದ್ರೆ ಅದು ಬಿಜೆಪಿಯಿಂದ ಮಾತ್ರ ಅವರು ನನ್ನ ಎದುರು ಮಾತನಾಡಲಿ ಮಾತನಾಡೋಣ.
ರಾಹುಲ್ ಗಾಂಧಿಯವರು ಇವತ್ತಿಗೂ ಸಹ ಪಕ್ಷವನ್ನು ನಡೆಸಿಕೊಂಡು ಬರ್ತಿದ್ದಾರೆ ಎಂದರು.
ಸುರ್ಜೇವಾಲಾ, ವೇಣುಗೋಪಾಲ ಅವರು ಗಂಭೀರವಾಗಿ ಸರ್ಕಾರ ಬರಲು ಜವಾಬ್ದಾರಿ ತೆಗೆದುಕೊಂಡಿದ್ದರು. ಇವರ 5 ವರ್ಷ ನಡವಳಿಕೆ ಎಲ್ಲರಿಗೂ ಗೊತ್ತಿದೆ. ಜನರ ಆಶೀರ್ವಾದದಿಂದ 138 ಸೀಟ್ ಕೊಟ್ಟಿದ್ದಾರೆ. ವಿರೋಧ ಪಕ್ಷದವರು ಮಾಧ್ಯಮವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು ಆದರೆ ಸಕ್ಸಸ್ ಗ್ಯಾರಂಟಿ ಯೋಜನೆ ಸಕ್ಸಸ್ ಆಗಿದೆ. ಅಭಿವೃದ್ಧಿಗೆ ಒಬ್ಬೊಬ್ಬ ಶಾಸಕರಿಗೂ 50 ಕೋಟಿ ನೀಡಲಾಗಿದೆ. ಕಾಂಗ್ರೆಸ್ ಆಡಳಿತದ ಬಗ್ಗೆ ಮಾಡಿದ ಆರೋಪಗಳು ಕೂಡ ಸುಳ್ಳಾಯಿತು ಎಂದು ಹೇಳಿದರು.
ವಿಪಕ್ಷ ನಾಯಕರುಗಳು ಮಾತನಾಡುವುದನ್ನ ಬಿಟ್ಟು ಪ್ರಾಮಾಣಿಕತೆಯಿಂದ ನನ್ನ ಮುಂದೆ ಚರ್ಚೆ ಮಾಡಲಿ. ಪಕ್ಷ ನನಗೆ ಜವಾಬ್ದಾರಿ ಕೊಟ್ಟಿದೆ ಅದನ್ನು ಸೂಕ್ತವಾಗಿ ನಾನು ನಿರ್ವಹಿಸುತ್ತೇನೆ, ಎಲ್ಲಕಿಂತ ಪಕ್ಷ ದೊಡ್ಡದು. ಸಿದ್ದರಾಮಯ್ಯ ಮುಖ್ಯಮಂತ್ರ ಆಗಿದ್ದಾರೆ. ನಾನು ಮಂತ್ರಿಯಾಗಿದ್ದೇನೆ. ಪಕ್ಷ ಅಂದ ಮೇಲೆ ವಿವಿಧ ಚರ್ಚೆ ಇದ್ದೆ ಇರುತ್ತದೆ ಎಂದು ಹೇಳಿದರು.

*ಹೈಕಮಾಂಡ್ ಸೂಕ್ತ ಸಂದೇಶ ಕೊಡಬೇಕಾಗುತ್ತೆ:*
ಕರ್ನಾಟಕ ದೊಡ್ಡ ರಾಜ್ಯ ಸೂಕ್ತ ತಿರ್ಮಾನ ತೆಗೆದುಕೊಳ್ಳುತ್ತಾರೆ. ಕೇಂದ್ರ ಸರ್ಕಾರ ಟ್ಯಾಕ್ಸ್ ಪಡೆದು ರಾಜ್ಯಕ್ಕೆ ಸಮಪಾಲು ಕೊಡ್ತಿಲ್ಲ. ನಮ್ಮ ಪಕ್ಷದ ಶಾಸಕರು ಜೈಲಿನಲ್ಲಿದ್ದಾರೆ ಅವರನ್ನ ನೋಡಕ್ಕೋದ್ರೆ ತಪ್ಪೇನು ಎಂದರು.
ಕುಮಾರಸ್ವಾಮಿ ಬಂಡವಾಳ ನಡೆಯುತ್ತಿಲ್ಲ. ಅದಕ್ಕೆ ಬಿಜೆಪಿ ಹಿಂದೆ ಹೋಗಿದ್ದಾರೆ. ಬಿಜೆಪಿಯಲ್ಲಿ ಇವರ ಆಟ ನಡೆಯಲ್ಲ ಇವರನ್ನು ಸಿಎಂ ಮಾಡಲ್ಲ ಎಂದು ವ್ಯಂಗ್ಯವಾಡಿದರು. ಶಾಸಕ ರವಿಕುಮಾರ್ ಗಣಿಗ, ಅಪ್ಪಾಜಿಗೌಡ, ಮನ್ ಮುಲ್ ಅಧ್ಯಕ್ಷ ಶಿವಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ,ಅಶೋಕ್ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು