7:28 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ಬೈಕ್ ಮೇಲೆ ಆಕೇಶಿಯಾ ಮರ ಬಿದ್ದು ಯುವಕ ಸಾವು: ತಡರಾತ್ರಿ ನಡೆದ ದುರ್ಘಟನೆ

27/07/2024, 13:10

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 26 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೋಣಂದೂರಿಗೆ ಕೆಲಸದ ನಿಮಿತ್ತ ರಾಮಪ್ಪ ತೆರಳಿದ್ದರು. ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ ಮರವೊಂದು ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ 12.30 ಸುಮಾರಿಗೆ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುರಾಜ ಹೆಗ್ಡೆ ಭೇಟಿ ನೀಡಿದ್ದರು. ಈ ಹಿಂದೆ ದೇಮ್ಲಾಪುರ ಸಮೀಪ ಬೈಕ್ ಮೇಲೆ ಮರಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು