9:15 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ರೈಲಿನಲ್ಲಿ ಆರ್‌ಪಿಎಫ್ ಕಾನ್ ಸ್ಟೇಬಲ್ ನಿಂದ ಗುಂಡಿನ ದಾಳಿ: ಎಎಸ್ಐ ಸಹಿತ 4 ಮಂದಿ ಸಾವು

01/08/2023, 00:25

ಮುಂಬೈ(reporterkarnataka.com): ಚಲಿಸುತ್ತಿದ್ದ ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಇಂದು ಆರ್ ಪಿಎಫ್ ಕಾನ್ ಸ್ಟೇಬಲ್ ನಡೆಸಿದ ಗುಂಡಿನ ದಾಳಿಗೆ ಎಎಸ್ಐ ಸಹಿತ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜೈಪುರದಿಂದ ಮುಂಬೈಗೆ ಹೋಗುತ್ತಿದ್ದ ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎಂಬಾತ ಮನಬಂದಂತೆ ಗುಂಡು ಹಾರಿಸ ನಾಲ್ವರನ್ನು ಕೊಂದಿದ್ದಾನೆ. ಪಾಲ್ಘರ್ ಸ್ಟೇಷನ್ ಬಳಿ ಈ ಘಟನೆ ನಡೆದಿದೆ.
ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ರೈಲ್ವೇ ರಕ್ಷಣಾ ಪಡೆಯ ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎಎಸ್‌ಐ ಟಿಕಾರಾಂ ಮೀನಾ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ. ನಂತರ ಮತ್ತೊಂದು ಬೋಗಿಯಲ್ಲಿದ್ದ ಮೂವರು ಪ್ರಯಾಣಿಕರ ಮೇಲೆ ಗುಂಡು ಹಾರಿಸಿದ್ದಾನೆ. ಇದರ ಪರಿಣಾಮ ಮೂವರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಬಳಿಕ ಮುಂದಿನ ನಿಲ್ದಾಣದಲ್ಲಿ ರೈಲು ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ (ಪಶ್ಚಿಮ ರೈಲ್ವೆ) ಪ್ರವೀಣ್ ಸಿನ್ಹಾ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ಅವನು ಸುಲಭವಾಗಿ ಕೋಪಗೊಳ್ಳುವ ಪ್ರವೃತ್ತಿಯನ್ನು ಹೊಂದಿದ್ದಾನೆ ಎಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು