2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು