10:40 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ: ಕಾಂಗ್ರೆಸ್ ನಿಂದ ಭಾರೀ ಪ್ರತಿಭಟನೆ, ಮಾನವ ಸರಪಳಿ

17/02/2022, 11:21

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ ಮಡುಗಿನ ಬಸಪ್ಪ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ವಾಲ್ಮೀಕಿ ವೃತ್ತದಿಂದ ಪ್ರತಿಭಟನ ಆರಂಭಿಸಿ ನೆಹರು ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಇಓ ಮೇಲೆ ಹಲ್ಲೆ ನಡೆಸಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಘೊಷಣೆಗಳನ್ನು ಕೂಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ ಮಾತನಾಡಿ ಸರ್ಕಾರಿ ಅಧಿಕಾರಿಯು ಕರ್ತವ್ಯ ನಿರ್ವಹಿಸುವಾಗ ಹಲ್ಲೆ ನಡೆಸಿದ್ದಾರೆ, ಇದು ಬಿಜೆಪಿ ಕಾರ್ಯಕರ್ತರ ಗುಂಡಾಗಿರಿ, ಒಬ್ಬ ಅಧಿಕಾರಿ ಮೇಲೆ ಹಲ್ಲೆ ನಡೆಸಿದರೆ, ಜನಸಾಮಾನ್ಯರ ಗತಿಯೇನು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ ಎಂದು ಬಿಜೆಪಿ ಕಾರ್ಯಕರ್ತರು ಗುಂಡಾಗಿರಿ ಮಾಡುತ್ತಿದ್ದಾರೆ. ಇಂತಹ ಗುಂಡಾಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತ ಪಡಿಸಿದರು.

ನಂತರ ತಾಲ್ಲೂಕು ಕಚೇರಿ ಬಳಿ ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಶಂಕರ್, ಜಿಪಂ ಮಾಜಿ ಸದಸ್ಯ ಪ್ರಕಾಶ ಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಸದಸ್ಯರಾದ ರಮೇಶ್ ಗೌಡ, ವೈ. ಪ್ರಕಾಶ್, ರಾಘವೇಂದ್ರ, ಮಲ್ಲಿಕಾರ್ಜುನ, ವೀರಭದ್ರಪ್ಪ, ಮುಖಂಡರಾದ ರವಿಕುಮಾರ್, ಡಿ.ಕೆ. ಕಾಟಯ್ಯ, ಸಿ.ಟಿ. ಶ್ರೀನಿವಾಸ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು